ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್‌ಗೆ ಗೋವಾ ಕೋರ್ಟ್ ನಿಂದ ಸಮನ್ಸ್
ಪಣಜಿ: ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಗೋವಾ ನ್ಯಾಯಾಲಯ ಮಂಗಳವಾರ ಸಮನ್ಸ್ ಜಾರಿ ಮಾಡಿದ್ದು, ನವೆಂಬರ್ 29ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಆಮ್ ಆದ್ಮಿ ಪಕ್ಷದ ಸ್ಥಳೀಯ ಘಟಕವು ಸಮನ್ಸ್ ಸ್ವೀಕರಿಸಿದೆ. ಆದರೆ ದೆಹಲಿ ಮುಖ್ಯಮಂತ್ರಿ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯ ವಿವರಗಳ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.
ನ್ಯಾಯಾಲಯದ ಮೂಲಗಳ ಪ್ರಕಾರ, ದೆಹಲಿ ಸಿಎಂ ವಿರುದ್ಧ ಭಾರತೀಯ ದಂಡ ಸಂಹಿತೆಯ(IPC) ಪ್ರಜಾಪ್ರತಿನಿಧಿ ಕಾಯ್ದೆ ಮತ್ತು ಸೆಕ್ಷನ್ 171 (E) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ಕೇಜ್ರಿವಾಲ್ ಅವರು ನ್ಯಾಯಾಲಯಕ್ಕೆ ಹಾಜರಾಗಬೇಕಿರುವ ಒಂದು ದಿನ ಮೊದಲು ಅಂದರೆ ಮಂಗಳವಾರ ಸಮನ್ಸ್ ಸ್ವೀಕರಿಸಿದ್ದೇವೆ ಎಂದು ಎಎಪಿ ಗೋವಾ ಮುಖ್ಯಸ್ಥ ಅಮಿತ್ ಪಾಲೇಕರ್ ಅವರು ಹೇಳಿದ್ದಾರೆ.
ಈ ಸಂಬಂಧ 2018 ರಲ್ಲಿ ಚಾರ್ಜ್ ಶೀಟ್ ಸಲ್ಲಿಸಿದಂತೆ ಕಾಣುತ್ತಿದ್ದು, ಆದರೆ ಪ್ರಕರಣದ ಬಗ್ಗೆ ಹೆಚ್ಚಿನ ವಿವರಗಳು ನಮಗೆ ತಿಳಿದಿಲ್ಲ ಎಂದು ಅವರು ಹೇಳಿದ್ದಾರೆ.
ಬುಧವಾರ ದೆಹಲಿ ಸಿಎಂ ಕೇಜ್ರಿವಾಲ್ ಅವರ ಪರವಾಗಿ ತಾವು ನ್ಯಾಯಾಲಯಕ್ಕೆ ಹಾಜರಾಗುವುದಾಗಿ ವಕೀಲರೂ ಆಗಿರುವ ಪಾಲೇಕರ್ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ