ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಸೆಂಥಿಲ್ ಬಾಲಾಜಿ ಅವರು ಅನಾರೋಗ್ಯದ ಕಾರಣ ನೀಡಿ ಜಾಮೀನು ಕೋರಿದ್ದರು.
ಅಕ್ಟೋಬರ್ 19 ರಂದು ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದ ಮದ್ರಾಸ್ ಹೈಕೋರ್ಟ್ ಆದೇಶದ ವಿರುದ್ಧದ ಬಾಲಾಜಿ ಅವರು ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆರೋಪಿಗೆ ಜಾಮೀನು ನೀಡಿದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಎಂದು ಹೇಳಿ, ಅರ್ಜಿ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಎಸ್‌ಸಿ ಶರ್ಮಾ ಅವರ ಪೀಠ, ಸೆಂಥಿಲ್ ಬಾಲಾಜಿ ಅವರ ಆರೋಗ್ಯಕ್ಕೆ ಸಂಬಂಧಿಸಿದ ವರದಿಗಳನ್ನು ಅವಲೋಕಿಸಿದ ನಂತರ, ಅವರ ಆರೋಗ್ಯದಲ್ಲಿ ಗಂಭೀರವಾದ ಸಮಸ್ಯೆ ಏನೂ ಇಲ್ಲ ಎಂದು ಹೇಳಿದೆ ಮತ್ತು ನಿಯಮಿತ ಜಾಮೀನು ಪಡೆಯಲು ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ.
Advertisement