ಉತ್ತರಾಖಂಡ್ ಸರ್ಕಾರದಿಂದ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರಿಗೆ 1 ಲಕ್ಷ ರೂಪಾಯಿ ಘೋಷಣೆ

ಸಿಲ್ಕ್ಯಾರ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಉತ್ತರಾಖಂಡ್ ಸಿಎಂ ಪುಷ್ಕರ್ ಸಿಂಗ್ ಧಾಮಿ ತಲಾ 1 ಲಕ್ಷ ರೂಪಾಯಿ ಘೋಷಣೆ ಮಾಡಿದ್ದಾರೆ.
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಉತ್ತರಕಾಶಿ: ಸಿಲ್ಕ್ಯಾರ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಉತ್ತರಾಖಂಡ್ ಸಿಎಂ ಪುಷ್ಕರ್ ಸಿಂಗ್ ಧಾಮಿ ತಲಾ 1 ಲಕ್ಷ ರೂಪಾಯಿ ಘೋಷಣೆ ಮಾಡಿದ್ದಾರೆ.

ಸಿಲ್ಕ್ಯಾರ ಟನಲ್ ಕುಸಿತದ ಹಿನ್ನೆಲೆಯಲ್ಲಿ ನಿರ್ಮಾಣ ಹಂತದಲ್ಲಿರುವ ಇತರ ಟನಲ್ ಗಳನ್ನೂ ಪರಿಶೀಲನೆ ಮಾಡಲಾಗುವುದು ಎಂದು ಸಿಎಂ ಧಾಮಿ ತಿಳಿಸಿದ್ದಾರೆ. ಮಂಗಳವಾರ ರಾತ್ರಿ 41 ಕಾರ್ಮಿಕರನ್ನು ಯಶಸ್ವಿಯಾಗಿ ಸ್ಥಳಾಂತರಿಸುವ ಕುರಿತು ಮಾತನಾಡಿದ ಧಾಮಿ, ಇದು ಯುವ ಕಾರ್ಮಿಕರಿಂದ ಸಾಧ್ಯವಾಯಿತು ಎಂದು ಹೇಳಿದರು.

ಎಲ್ಲರೂ ಪೈಪ್ ಮೂಲಕ ಹೊರಬರುವಷ್ಟು ಸದೃಢರಾಗಿದ್ದರು ಎಂದು ಧಾಮಿ ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯಾದ್ಯಂತ ನಿರಂತರ ಬೆಂಬಲ ನೀಡಿದ ಪ್ರಧಾನಿ ಮೋದಿಗೆ ಧಾಮಿ ಧನ್ಯವಾದ ತಿಳಿಸಿದ್ದಾರೆ. 41 ಕಟ್ಟಡ ಕಾರ್ಮಿಕರಿಗೆ ತಲಾ 1 ಲಕ್ಷ ರೂಪಾಯಿ ನೀಡುವುದಾಗಿ ಮುಖ್ಯಮಂತ್ರಿ ಘೋಷಿಸಿದರು. ಬೌಖ್ನಾಗ್ ದೇವಾಲಯವನ್ನು ಪುನರ್ನಿರ್ಮಿಸಲಾಗುವುದು ಮತ್ತು ಬೆಟ್ಟದ ರಾಜ್ಯದಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗಗಳನ್ನು ಪರಿಶೀಲಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com