ರಾಜಸ್ತಾನ: ಪಶ್ಚಿಮ ಬಂಗಾಳ ಮೂಲದ ಮತ್ತೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆ; ಈ ವರ್ಷದಲ್ಲಿ 25ನೇ ಪ್ರಕರಣ

ಪಶ್ಚಿಮ ಬಂಗಾಳ ಮೂಲದ 20 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ಇಲ್ಲಿನ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ಕೊಠಡಿಯಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೋಟಾ: ಪಶ್ಚಿಮ ಬಂಗಾಳ ಮೂಲದ 20 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ಇಲ್ಲಿನ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ಕೊಠಡಿಯಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಬಿರ್ಹಮ್ ಜಿಲ್ಲೆಯವರಾದ ಫೌರೀದ್ ಹುಸೇನ್ (20) ಕೋಟಾದ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌ಗೆ ಸುಮಾರು ಒಂದು ವರ್ಷದಿಂದ ತಯಾರಿ ನಡೆಸುತ್ತಿದ್ದರು.

ಈ ವರ್ಷ ಜುಲೈನಿಂದ ವೌಫ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಅದೇ ಮನೆಯಲ್ಲಿ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗಳ ಇತರ ಕೆಲವು ವಿದ್ಯಾರ್ಥಿಗಳು ವಾಸಿಸುತ್ತಿದ್ದರು.

ಸೋಮವಾರ ಮಧ್ಯಾಹ್ನ ಹುಸೇನ್ ಕೊನೆಯದಾಗಿ ಕಾಣಿಸಿಕೊಂಡಿದ್ದರು. ರಾತ್ರಿ 8 ಗಂಟೆಯಾದರೂ ಕೊಠಡಿಯಿಂದ ಹೊರಗೆ ಬಾರದಿದ್ದಾಗ, ಸ್ನೇಹಿತರು ಕರೆ ಮಾಡಿದ್ದಾರೆ. ಆಗಲೂ ಬಾಗಿಲು ತೆರೆಯದಿದ್ದಾಗ ಮನೆಯ ಮಾಲೀಕರಿಗೆ ಮಾಹಿತಿ ನೀಡಲಾಗಿದೆ. ಅವರು ಪೊಲೀಸರಿಗೆ ಕರೆ ಮಾಡಿದ್ದಾರೆ ಎಂದು ದಾದಾಬರಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ರಾಜೇಶ್ ಪಾಠಕ್ ತಿಳಿಸಿದ್ದಾರೆ.

ಪೊಲೀಸರು ಸ್ಥಳಕ್ಕೆ ಧಾವಿಸಿ ಬಾಗಿಲು ಮುರಿದು ನೋಡಿದಾಗ ಯುವಕ ನೇಣು ಬಿಗಿದುಕೊಂಡಿರುವುದನ್ನು ಕಂಡಿದ್ದಾರೆ. ಕೋಣೆಯಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಮತ್ತು ಇದರ ಹಿಂದಿನ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ' ಎಂದು ಅವರು ಹೇಳಿದರು.

ಪೋಷಕರು ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಈ ವರ್ಷ ಇಲ್ಲಿ ಕೋಚಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ 25ನೇ ಪ್ರಕರಣ ಇದಾಗಿದೆ.

ಸೆಪ್ಟೆಂಬರ್ 18 ರಂದು ಕೋಟಾದಲ್ಲಿ ನೀಟ್‌ಗೆ ತಯಾರಿ ನಡೆಸುತ್ತಿದ್ದ ಉತ್ತರ ಪ್ರದೇಶದ 16 ವರ್ಷದ ವಿದ್ಯಾರ್ಥಿನಿ ವಿಷಕಾರಿ ಪದಾರ್ಥವನ್ನು ಸೇವಿಸಿ ಸಾವಿಗೀಡಾಗಿದ್ದರು.  ಸೆಪ್ಟೆಂಬರ್ ತಿಂಗಳಲ್ಲಿ ನಡೆದ ಎರಡನೇ ಆತ್ಮಹತ್ಯೆ ಪ್ರಕರಣ ಇದಾಗಿದೆ.
ಆಗಸ್ಟ್‌ನಲ್ಲಿ ಆರು ಕೋಚಿಂಗ್ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com