ಉತ್ತರಾಖಂಡ ಸುರಂಗ ಕುಸಿತ: ಆರೋಗ್ಯ ತಪಾಸಣೆಗಾಗಿ ಏಮ್ಸ್ ಗೆ 41 ಕಾರ್ಮಿಕರ ಏರ್ ಲಿಫ್ಟ್
ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಿಂದ ಸುರಕ್ಷಿತವಾಗಿ ಹೊರಬಂದ 41 ಕಾರ್ಮಿಕರನ್ನು ಆರೋಗ್ಯ ತಪಾಸಣೆಗಾಗಿ ಬುಧವಾರ ಏಮ್ಸ್-ಋಷಿಕೇಶಕ್ಕೆ ವಿಮಾನದಲ್ಲಿ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳವಾರ ಸಂಜೆ ಅಂತ್ಯಗೊಂಡ 17 ದಿನಗಳ ಕಠಿಣ ಕಾರ್ಯಾಚರಣೆಯ ನಂತರ ಕುಸಿದ ಸುರಂಗದಿಂದ 41 ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಅವರನ್ನು ಚಿನ್ಯಾಲಿಸೌರ್‌ನ ಆಸ್ಪತ್ರೆಯಲ್ಲಿ ವೈದ್ಯಕೀಯ ನಿಗಾದಲ್ಲಿ ಇರಿಸಲಾಗಿತ್ತು. ಇದೀಗ ಏಮ್ಸ್ ಗೆ ಏರ್ ಲಿಫ್ಟ್ ಮಾಡಲಾಗಿದೆ.
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಎಲ್ಲಾ ಕಾರ್ಮಿಕರನ್ನು ಭೇಟಿಯಾಗಿ ತಲಾ 1 ಲಕ್ಷ ರೂ. ಪರಿಹಾರ ನೀಡಿದ್ದರು.
ಸುರಂಗದಲ್ಲಿ ಸಿಕ್ಕಿಬಿದ್ದ ಕಾರ್ಮಿಕರ ಅತ್ಯಂತ ತಾಳ್ಮೆ ಇದ್ದರು ಎಂದು ಶ್ಲಾಘಿಸಿದ ಉತ್ತರಾಖಂಡ ಮುಖ್ಯಮಂತ್ರಿ, ರಕ್ಷಣಾ ಸಿಬ್ಬಂದಿ ತಮ್ಮ ಕೆಲಸ ಮಾಡುವಾಗ ಕಾಯಲು ಸಿದ್ಧರಿದ್ದರಿಂದ ಅವರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಸಂಕಲ್ಪ ಈಡೇರಿದೆ ಎಂದರು.
ಕಾರ್ಮಿಕರನ್ನು ಮೊದಲು ಆಸ್ಪತ್ರೆಯ ಟ್ರಾಮಾ ವಾರ್ಡ್‌ಗೆ ಕರೆದೊಯ್ಯಲಾಗುತ್ತದೆ. ಅಲ್ಲಿಂದ ಅವರನ್ನು ಆರೋಗ್ಯ ತಪಾಸಣೆಗಾಗಿ ವಿಪತ್ತು ವಾರ್ಡ್‌ಗೆ ಸ್ಥಳಾಂತರಿಸಲಾಗುತ್ತದೆ ಎಂದು ಏಮ್ಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಏಮ್ಸ್-ಋಷಿಕೇಶದ ವಿಪತ್ತು ವಿಭಾಗವು 100 ಹಾಸಿಗೆಗಳ ಸಾಮರ್ಥ್ಯವನ್ನು ಹೊಂದಿದೆ. 41 ಕಾರ್ಮಿಕರಿಗೆ ಅನುಕೂಲ ಕಲ್ಪಿಸಲು ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ