ಚುನಾವಣೋತ್ತರ ಸಮೀಕ್ಷೆ: ತೆಲಂಗಾಣ, ಮಧ್ಯ ಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನದ ನಾಯಕರು ಹೇಳಿದ್ದು ಹೀಗೆ...

ಮಧ್ಯಪ್ರದೇಶದಲ್ಲಿನ ಸಮೀಕ್ಷೆಗಳು ತುಂಬಾ ವಿಭಿನ್ನವಾಗಿವೆ. ಇಲ್ಲಿ ಕಾಂಗ್ರೆಸ್ 130ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ರೇವಂತ್ ರೆಡ್ಡಿ, ದಿಗ್ವಿಜಯ್ ಸಿಂಗ್, ಶಿವರಾಜ್ ಸಿಂಗ್ ಚೌಹ್ಹಾಣ್
ರೇವಂತ್ ರೆಡ್ಡಿ, ದಿಗ್ವಿಜಯ್ ಸಿಂಗ್, ಶಿವರಾಜ್ ಸಿಂಗ್ ಚೌಹ್ಹಾಣ್

ನವದೆಹಲಿ: ಐದು ರಾಜ್ಯಗಳ ವಿಧಾನಸಭೆಯ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿದ್ದು, ತೆಲಂಗಾಣ, ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಇದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳಲಿದ್ದು, ಕಮಲ ಅರಳಲಿದೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ. ಈ ಸಮೀಕ್ಷೆಗಳ ಕುರಿತು ಆ ರಾಜ್ಯಗಳ ಪ್ರಮುಖ ನಾಯಕರು ಪ್ರತಿಕ್ರಿಯಿಸಿದ್ದಾರೆ. 

ತೆಲಂಗಾಣದಲ್ಲಿನ ಚುನಾವಣೆ ಕಾಂಗ್ರೆಸ್ vs ಬಿಆರ್ ಎಸ್ ಅಲ್ಲ. ಎಕ್ಸಿಟ್ ಪೋಲ್‌ಗಳು ತೆಲಂಗಾಣ ಜನತೆಯ ಗೆಲುವನ್ನು ಸೂಚಿಸುತ್ತವೆ ಎಂದು ಆ ರಾಜ್ಯದ ಕಾಂಗ್ರೆಸ್ ಅಧ್ಯಕ್ಷ ರೆವಂತ್ ರೆಡ್ಡಿ ಹೇಳಿದ್ದಾರೆ. 

ಇನ್ನೂ ಮಧ್ಯಪ್ರದೇಶದಲ್ಲಿನ ಸಮೀಕ್ಷೆಗಳು ತುಂಬಾ ವಿಭಿನ್ನವಾಗಿವೆ. ಇಲ್ಲಿ ಕಾಂಗ್ರೆಸ್ 130ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಅತ್ಯುತ್ತಮ ಬೆಂಬಲ ವ್ಯಕ್ತವಾಗಿದ್ದು, ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬ ಸಮೀಕ್ಷೆ ವರದಿ ತಳ್ಳಿಹಾಕಿರುವ ಮಾಜಿ ಸಿಎಂ  ರಮಣ್ ಸಿಂಗ್ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com