ಮೊವ್: ಖಾಸಗಿ ಶಾಲಾ ಬಸ್ ಪಲ್ಟಿಯಾದ ಪರಿಣಾಮ 12 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಮೊವ್ ಪಟ್ಟಣದ ಬಳಿ ಭಾನುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದೋರ್‌ನಿಂದ ಮಹೇಶ್ವರಕ್ಕೆ ಬಸ್ ಹೋಗುತ್ತಿದ್ದಾಗ ಈ ಘಟನೆ ನಡೆದಿದ್ದು, ನಾಲ್ವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಂದೋರ್ ಮೂಲದ ಖಾಸಗಿ ಶಾಲೆಯ ಎಂಟು ಬಸ್‌ಗಳು ಭಾನುವಾರ ಬೆಳಗ್ಗೆ ಮೊವ್ ಮತ್ತು ಜಾಮ್ ಘಾಟ್ ಮೂಲಕ ಮಹೇಶ್ವರಕ್ಕೆ ಹೋಗುತ್ತಿದ್ದವು ಎಂದು ಬಡಗೊಂಡ ಪೊಲೀಸ್ ಠಾಣೆಯ ಉಸ್ತುವಾರಿ ಕೈಲಾಶ್ ಸೋಲಂಕಿ ತಿಳಿಸಿದ್ದಾರೆ.
ಬೆಳಿಗ್ಗೆ 9 ಗಂಟೆ ಸುಮಾರಿಗೆ ಬಸ್‌ಗಳು ಜಾಮ್ ಘಾಟ್ ಮೂಲಕ ಹೋಗುತ್ತಿದ್ದಾಗ, ಬಸ್ ಒಂದರ ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದ ಬಸ್ ಪಲ್ಟಿಯಾಗಿದೆ. ಪರಿಣಾಮ 10 ಮತ್ತು 12ನೇ ತರಗತಿಯ 12 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಇಂದೋರ್‌ಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
Advertisement