ಬಿಹಾರ ಜಾತಿ ಗಣತಿ ವರದಿ ಬಳಿಕ ಪ್ರಧಾನಿ ಮೋದಿ ಹೇಳಿದ್ದೇನು ಅಂದರೆ...

ಬಿಹಾರದಲ್ಲಿ ಜಾತಿ ಗಣತಿ ವರದಿ ಪ್ರಕಟವಾಗುತ್ತಿದ್ದಂತೆಯೇ ರಾಜಕೀಯ ವಲಯದಲ್ಲಿ ಚರ್ಚೆಗಳು ಆರಂಭವಾಗಿವೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ಭೋಪಾಲ್: ಬಿಹಾರದಲ್ಲಿ ಜಾತಿ ಗಣತಿ ವರದಿ ಪ್ರಕಟವಾಗುತ್ತಿದ್ದಂತೆಯೇ ರಾಜಕೀಯ ವಲಯದಲ್ಲಿ ಚರ್ಚೆಗಳು ಆರಂಭವಾಗಿವೆ.ಚುನಾವಣಾ ಕಣವಾಗಿರುವ ಮಧ್ಯಪ್ರದೇಶದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಬಿಹಾರದ ಜಾತಿ ಗಣತಿ ವರದಿಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
 
ತೀಕ್ಷ್ಣವಾಗಿ ವಾಗ್ದಾಳಿ ನಡೆಸಿರುವ ಪ್ರಧಾನಿ ಮೋದಿ, ಜಾತಿಯ ಹೆಸರಿನಲ್ಲಿ ದೇಶವನ್ನು ಒಡೆಯಲು ವಿಪಕ್ಷಗಳು ಯತ್ನಿಸುತ್ತಿವೆ ಎಂದು ಆರೋಪಿಸಿದ್ದಾರೆ. ಬಿಹಾರದ ವರದಿಯನ್ನು ಪ್ರಧಾನಿ ಮೋದಿ ನೇರವಾಗಿ ಉಲ್ಲೇಖಿಸದೇ ಇದ್ದರೂ ವಿಪಕ್ಷಗಳು ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಮಾಡದೇ ಬಡವರ ಭಾವನೆಗಳೊಂದಿಗೆ ಆಟವಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಆಗಿನಿಂದಲೂ ಅವರು ಬಡವರ ಭಾವನೆಗಳೊಂದಿಗೆ ಆಟವಾಡುತ್ತಿದ್ದಾರೆ. ಇಂದಿಗೂ ಅವರು ಅದನ್ನೇ ಮಾಡುತ್ತಿದ್ದಾರೆ. ಈ ಹಿಂದೆ ಜಾತಿ ಹೆಸರಿನಲ್ಲಿ ದೇಶವನ್ನು ಅವರು ಒಡೆದರು ಇಂದೂ ಸಹ ಅವರು ಅದೇ ಪಾಪ ಮಾಡುತ್ತಿದ್ದಾರೆ ಈ ಹಿಂದೆ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಇತ್ತು ಇಂದು ಅವರು ಮತ್ತಷ್ಟು ಭ್ರಷ್ಟರಾಗಿದ್ದಾರೆ ಎಂದು ಗ್ವಾಲಿಯರ್ ನಲ್ಲಿ ಪ್ರಧಾನಿ ಮೋದಿ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜಾತಿ ಆಧಾರದಲ್ಲಿ ವಿಭಜನೆ ಮಾಡುವುದನ್ನು ಪ್ರಧಾನಿ ಮೋದಿ ಪಾಪ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com