ಛತ್ತೀಸ್‌ಗಢ: 27,000 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ, ಉದ್ಘಾಟನೆ

ಪ್ರಧಾನಮಂತ್ರಿ ನರೇಂದ್ರ ಮೋದಿ  ಮಂಗಳವಾರ ನಾಗರ್ನಾರ್‌ನಲ್ಲಿರುವ ಎನ್‌ಎಂಡಿಸಿ ಸ್ಟೀಲ್ ಲಿಮಿಟೆಡ್‌ನ ಉಕ್ಕು ಕಾರ್ಖಾನೆ ಸೇರಿದಂತೆ ಸುಮಾರು ರೂ.27,000 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು. 
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ಜಗದಾಲ್ ಪುರ: ಪ್ರಧಾನಮಂತ್ರಿ ನರೇಂದ್ರ ಮೋದಿ  ಮಂಗಳವಾರ ನಾಗರ್ನಾರ್‌ನಲ್ಲಿರುವ ಎನ್‌ಎಂಡಿಸಿ ಸ್ಟೀಲ್ ಲಿಮಿಟೆಡ್‌ನ ಉಕ್ಕು ಕಾರ್ಖಾನೆ ಸೇರಿದಂತೆ ಸುಮಾರು ರೂ.27,000 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು. 

ಕಾರ್ಯಕ್ರಮಕ್ಕೂ ಮುನ್ನ ರಾಜ್ಯದ ಬಸ್ತಾರ್ ಪ್ರದೇಶದ ದಂತೇಶ್ವರಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ, ನಾಗಾರ್ನಾರ್‌ನಲ್ಲಿ ರೂ. 23,800 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾದ ಉಕ್ಕಿನ ಕಾರ್ಖಾನೆಯನ್ನುಉದ್ಘಾಟಿಸಿದರು. ಇದು ಉತ್ತಮ ಗುಣಮಟ್ಟದ ಉಕ್ಕನ್ನು ಉತ್ಪಾದಿಸುವ ಗ್ರೀನ್‌ಫೀಲ್ಡ್ ಯೋಜನೆಯಾಗಿದೆ.

ದೇಶದ ಪ್ರತಿಯೊಂದು ಮೂಲೆಯೂ ಅಭಿವೃದ್ಧಿವಾದಾಗ ಮಾತ್ರ ದೇಶ ಪ್ರಗತಿ ಸಾಧ್ಯ ಎಂದರು. ಇಂದು 27,000 ಕೋಟಿ ರೂ.ಗೂ ಹೆಚ್ಚು ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಾಗಿದೆ ಮತ್ತು ಶಂಕುಸ್ಥಾಪನೆ ಮಾಡಲಾಗಿದೆ ಎಂದು ಅವರು ಹೇಳಿದರು

ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಅಂತಗಢ ಮತ್ತು ತರೋಕಿ ನಡುವೆ ಹೊಸ ರೈಲು ಮಾರ್ಗ ಮತ್ತು ಜಗದಾಲ್‌ಪುರ- ದಾಂತೇವಾರ ನಡುವಿನ ಜೋಡಿ ರೈಲು ಮಾರ್ಗವನ್ನು ಲೋಕಾರ್ಪಣೆ ಮಾಡಿದರು. ಬೋರಿದಂಡ್-ಸೂರಜ್‌ಪುರ ಜೋಡಿ ಮಾರ್ಗ ಯೋಜನೆ ಮತ್ತು ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿಯಲ್ಲಿ ಜಗದಾಲ್‌ಪುರ ನಿಲ್ದಾಣದ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಿದರು. ತರೋಕಿ - ರಾಯ್‌ಪುರ್ ಡೇಮೂ ರೈಲು ಸೇವೆಗೆ ಚಾಲನೆ ನೀಡಿದರು.

ಈ ರೈಲು ಯೋಜನೆಗಳು ಛತ್ತೀಸ್‌ಗಢದ ಬುಡಕಟ್ಟು ಪ್ರದೇಶಗಳಲ್ಲಿ ಸಂಪರ್ಕವನ್ನು ಸುಧಾರಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಧಾರಿತ ರೈಲು ಮೂಲಸೌಕರ್ಯ ಮತ್ತು ಹೊಸ ರೈಲು ಸೇವೆಯು ಸ್ಥಳೀಯ ಜನರಿಗೆ ಪ್ರಯೋಜನವನ್ನು ನೀಡುತ್ತದೆ ಮತ್ತು ಪ್ರದೇಶದ ಆರ್ಥಿಕ ಅಭಿವೃದ್ಧಿಗೆ ಸಹಾಯ ಮಾಡುತ್ತದೆ. ರಾಷ್ಟ್ರೀಯ ಹೆದ್ದಾರಿ-43 ರ ಕುಂಕೂರಿಯಿಂದ ಛತ್ತೀಸ್‌ಗಢ-ಜಾರ್ಖಂಡ್ ಗಡಿ ಭಾಗದವರೆಗೆ ರಸ್ತೆ ನವೀಕರಣ ಯೋಜನೆಯನ್ನು ಸಹ ಪ್ರಧಾನಿ ಲೋಕಾರ್ಪಣೆ ಮಾಡಿದರು. 

ವರ್ಷಾಂತ್ಯಕ್ಕೆ ಚುನಾವಣೆ ನಡೆಯಲಿರುವ ಐದು ರಾಜ್ಯಗಳಲ್ಲಿ ಛತ್ತೀಸ್‌ಗಢವೂ ಸೇರಿದೆ. 2018ರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯಲು ಬಿಜೆಪಿ ಹವಣಿಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com