ಸಿಕ್ಕಿಂನಲ್ಲಿ ಮೇಘಸ್ಫೋಟ: ಹಠಾತ್ ಪ್ರವಾಹದಲ್ಲಿ 23 ಸೈನಿಕರು ನಾಪತ್ತೆ; ತೀಸ್ತಾ ನದಿಯಲ್ಲಿ ಕೊಚ್ಚಿಹೋದವರಿಗಾಗಿ ಶೋಧ ಕಾರ್ಯ
ಗಂಗಟೋಕ್ : ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿ ವೆಂಟಿಮೂರು ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ.
ಉತ್ತರ ಸಿಕ್ಕಿಂನಲ್ಲಿ ಮೇಘಸ್ಫೋಟ, ಪ್ರವಾಹ ಸಂಭವಿಸಿದ್ದು, 23 ಮಂದಿ ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಅನೇಕ ಪ್ರದೇಶಗಳು ಜಲಾವೃತವಾಗಿವೆ, ಪ್ರವಾಹದ ನಂತರ ಚುಂಗ್‌ಥಾಂಗ್ ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡಿದ್ದರಿಂದ ಕೆಳಭಾಗದ ಪ್ರದೇಶಗಳಲ್ಲಿ ನೀರಿನ ಮಟ್ಟ ಇದ್ದಕ್ಕಿದ್ದಂತೆ 15-20 ಅಡಿ ಎತ್ತರಕ್ಕೆ ಏರಿದೆ ಎಂದು ವರದಿಯಾಗಿದೆ.
ಸಿಂಘ್‌ಥಾಮ್ ಬಳಿಯ ಬರ್ದಂಗ್‌ನಲ್ಲಿ ನಿಲ್ಲಿಸಲಾಗಿದ್ದ ಸೇನಾ ವಾಹನಗಳು ಮುಳುಗಿವೆ. ಇದಲ್ಲದೇ 23 ಸೇನಾ ಸಿಬ್ಬಂದಿಯೂ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ನದಿ ಉಕ್ಕಿ ಹರಿಯುತ್ತಿರುವ ಕಾರಣ ತೀಸ್ತಾ ನದಿಯ ಮೇಲಿನ ಸಿಂಥಮ್ ಕಾಲು ಸೇತುವೆ ಕುಸಿದಿದೆ. ಪಶ್ಚಿಮ ಬಂಗಾಳದ ಜಲ್ಪೈಗುರಿ ಆಡಳಿತವು ಮುನ್ನೆಚ್ಚರಿಕೆ ಕ್ರಮವಾಗಿ ನದಿಯ ಕೆಳಗಿನ ಜಲಾನಯನ ಪ್ರದೇಶದಿಂದ ಜನರನ್ನು ಸ್ಥಳಾಂತರಿಸುತ್ತಿದೆ. ಸಿಕ್ಕಿಂ ಸರ್ಕಾರ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿದೆ. ತೀಸ್ತಾ ನದಿಯಿಂದ ದೂರ ಇರುವಂತೆ ಜನರಿಗೆ ತಿಳಿಸಲಾಗಿದೆ. ಇನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಹಠಾತ್ ಪ್ರವಾಹದಿಂದ ಲಾಚೆನ್ ಕಣಿವೆಯ ಉದ್ದಕ್ಕೂ ಹಲವಾರು ಸೇನಾ ಸಂಸ್ಥೆಗಳಿಗೆ ಹಾನಿಯಾಗಿದೆ. ಇದೀಗ ನಾಪತ್ತೆಯಾಗಿರುವ ಸಿಬ್ಬಂದಿಯ ಪತ್ತೆಗೆ ಶೋಧಕಾರ್ಯ ನಡೆಸಲಾಗುತ್ತಿದೆ. ನದಿ ಉಕ್ಕಿ ಹರಿಯುತ್ತಿರುವುದರಿಂದ ತೀಸ್ತಾ ನದಿಯ ಮೇಲಿನ ಸಿಂಗ್‌ತಮ್ ಕಾಲು ಸೇತುವೆ ಕುಸಿದಿದೆ. ಪಶ್ಚಿಮ ಬಂಗಾಳದಿಂದ ಸಿಕ್ಕಿಂಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 10ರ ಹಲವು ಭಾಗಗಳು ಕೊಚ್ಚಿ ಹೋಗಿವೆ. ಭಾರೀ ಪ್ರವಾಹದ ಹಿನ್ನೆಲೆ ಅನೇಕ ರಸ್ತೆಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ