ಪ್ರಧಾನಿ ಮೋದಿ ಸುಳ್ಳಿನ ಸರದಾರ; ಬಿಜೆಪಿ, ಆರ್ ಎಸ್ ಎಸ್ ಮಹಿಳಾ ವಿರೋಧಿ: ಖರ್ಗೆ

ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಸುಳ್ಳಿ ಸರದಾರ’ ಎಂದು ಟೀಕಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ದೇಶದ ಜನ ಎಚ್ಚೆತ್ತುಕೊಂಡಿದ್ದು, 2024ರಲ್ಲಿ ಅವರ ‘ಕುತಂತ್ರ’ ಮುಂದುವರಿಯುವುದಿಲ್ಲ ಎಂದು ಬುಧವಾರ ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ರಾಯ್‌ಪುರ: ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಸುಳ್ಳಿ ಸರದಾರ’ ಎಂದು ಟೀಕಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ದೇಶದ ಜನ ಎಚ್ಚೆತ್ತುಕೊಂಡಿದ್ದು, 2024ರಲ್ಲಿ ಅವರ ‘ಕುತಂತ್ರ’ ಮುಂದುವರಿಯುವುದಿಲ್ಲ ಎಂದು ಬುಧವಾರ ಹೇಳಿದ್ದಾರೆ.

ರಾಯ್‌ಪುರದಿಂದ 220 ಕಿಮೀ ದೂರದಲ್ಲಿರುವ ರಾಯ್‌ಗಢ್ ಜಿಲ್ಲೆಯಲ್ಲಿ ಛತ್ತೀಸ್‌ಗಢ ಸರ್ಕಾರದ ಭರೋಸೆ ಕಾ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಖರ್ಗೆ, ಕಾಂಗ್ರೆಸ್ ಪಕ್ಷ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸದಿದ್ದರೆ ಮೋದಿ ಮತ್ತು ಅಮಿತ್ ಶಾ ಇಬ್ಬರೂ ಎಂದಿಗೂ ಪ್ರಧಾನಿ ಮತ್ತು ಗೃಹ ಮಂತ್ರಿಯಾಗುತ್ತಿರಲಿಲ್ಲ ಎಂದಿದ್ದಾರೆ.

"ಪಿಎಂ ಮೋದಿ ಅವರು ಛತ್ತೀಸ್‌ಗಢಕ್ಕೆ ಭೇಟಿ ನೀಡಿದಾಗಲೆಲ್ಲಾ ಕಾಂಗ್ರೆಸ್ ಪಕ್ಷವನ್ನು ದೂಷಿಸುವ ಸುಳ್ಳಿನ ಸರದಾರ. ಇತರ ರಾಜ್ಯಗಳ ಮುಖ್ಯಮಂತ್ರಿಗಳು ಅವರ ಮಾತು ಕೇಳದಿದ್ದರೆ ಇಡಿ, ಐಟಿ ಮತ್ತು ಇತರ ಏಜೆನ್ಸಿಗಳಿಂದ ದಾಳಿ ಮಾಡಿಸುತ್ತಾರೆ. ಅವರು(ಬಿಜೆಪಿ) ಪರಿವಾರದ (ರಾಜವಂಶದ ರಾಜಕೀಯ) ಬಗ್ಗೆ ಮಾತನಾಡುತ್ತಾರೆ. ಆದರೆ 1989 ರ ನಂತರ ಗಾಂಧಿ ಕುಟುಂಬದಿಂದ ಯಾರು ಪ್ರಧಾನಿಯಾಗಿದ್ದಾರೆ ಎಂದು ನನಗೆ ತಿಳಿಸಲಿ” ಎಂದು ಕಾಂಗ್ರೆಸ್ ಅಧ್ಯಕ್ಷ ಸವಾಲು ಹಾಕಿದರು.

ಮೋದಿ ಸರ್ಕಾರ ರಾಷ್ಟ್ರೀಯ ಆಸ್ತಿಯನ್ನು ಮಾರಾಟ ಮಾಡುತ್ತಿದೆ ಮತ್ತು ಉತ್ತಮ ಸರ್ಕಾರಿ ಸಂಸ್ಥೆಗಳಿಗೆ ಹಾನಿ ಮಾಡಿದೆ ಎಂದು ಖರ್ಗೆ ಆರೋಪಿಸಿದರು.

ಪ್ರಧಾನಿ ಮೋದಿ ಅವರು ಕೇವಲ ಚುನಾವಣೆ ನಡೆಯುವ ರಾಜ್ಯಗಳಿಗೆ ಮಾತ್ರ ಭೇಟಿ ನೀಡುತ್ತಾರೆ. ಆದರೆ ಕಳೆದ ಆರು ತಿಂಗಳಿನಿಂದ ಹಿಂಸಾಚಾರ ಮತ್ತು ಗಲಭೆಗಳಿಗೆ ಸಾಕ್ಷಿಯಾದ ಮಣಿಪುರ ರಾಜ್ಯಕ್ಕೆ ಹೋಗುವ ಬಗ್ಗೆ ಯೋಚಿಸುವುದಿಲ್ಲ ಎಂದು ಖರ್ಗೆ ವಾಗ್ದಾಳಿ ನಡೆಸಿದರು.

ಜನಸಂಘ, ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ಹಾಗೂ ಬಿಜೆಪಿಯರ ಸಿದ್ಧಾಂತ 'ಮಹಿಳಾ ವಿರೋಧಿ' ಸಿದ್ಧಾಂತ. ಪಂಚಾಯಿತಿಗಳಲ್ಲಿ ಮಹಿಳಾ ಮೀಸಲಾತಿ ಜಾರಿಗೆ ತಂದಿದ್ದೆ ಕಾಂಗ್ರೆಸ್ ಎಂದು ಖರ್ಗೆ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com