ಕುಲ್ಗಾಮ್‌ನಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಸಾವು, ಮುಂದುವರೆದ ಶೋಧ ಕಾರ್ಯಾಚರಣೆ!

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.
ಮೃತ ಉಗ್ರರು
ಮೃತ ಉಗ್ರರು

ಕುಲ್ಗಾಮ್: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.

ಪೊಲೀಸರ ಪ್ರಕಾರ, ಜಿಲ್ಲೆಯ ಕುಜ್ಜರ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದ್ದು ಭದ್ರತಾ ಸಿಬ್ಬಂದಿ ಭಯೋತ್ಪಾದಕರ ಮೃತದೇಹಗಳನ್ನು ವಶಪಡಿಸಿಕೊಂಡಿದ್ದು, ಶೋಧ ಕಾರ್ಯಾಚರಣೆ ಮುಂದುವರೆದಿದೆ. ಮೃತ ಭಯೋತ್ಪಾದಕರು ಶಬೀಕ್ ಅಹ್ಮದ್ ಲೋನ್ ಮತ್ತು ಬಸೀತ್ ಅಮೀನ್ ಭಟ್ ಎಂದು ತಿಳಿದುಬಂದಿದೆ. 

ಕಾಶ್ಮೀರ ವಲಯ ಪೊಲೀಸರು ಮೈಕ್ರೋಬ್ಲಾಗಿಂಗ್ ಸೈಟ್ ಎಕ್ಸ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕುಲ್ಗಾಮ್‌ನಲ್ಲಿ 2 ಭಯೋತ್ಪಾದಕರ ಹತ್ಯೆಯಾಗಿದೆ. ಎನ್‌ಕೌಂಟರ್ ನಡೆದ ಸ್ಥಳದಿಂದ ಹತರಾದ ಉಗ್ರರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ. ಭದ್ರತಾ ಪಡೆ ಮತ್ತು ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಬರೆದುಕೊಂಡಿದ್ದಾರೆ.

ಮತ್ತೊಂದೆಡೆ, ರಜೌರಿಯಲ್ಲಿ ಭಯೋತ್ಪಾದಕರನ್ನು ಹಿಡಿಯುವ ಕಾರ್ಯಾಚರಣೆ ಮೂರನೇ ದಿನವೂ ಮುಂದುವರೆದಿದೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಕಲಕೋಟೆ ಅರಣ್ಯ ಪ್ರದೇಶದಲ್ಲಿ ಅಡಗಿರುವ ಶಂಕಿತ ಉಗ್ರರನ್ನು ಪತ್ತೆ ಹಚ್ಚುವ ಉದ್ದೇಶದಿಂದ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ಬುಧವಾರ ಮೂರನೇ ದಿನವೂ ಮುಂದುವರಿದಿದೆ. ಸೋಮವಾರ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್ ನಂತರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಇದರಲ್ಲಿ ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡರು.

ಹಿರಿಯ ಅಧಿಕಾರಿಯ ಪ್ರಕಾರ, ಈ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಪೊಲೀಸರು ಸಕ್ರಿಯವಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದರೂ ಶಂಕಿತ ಭಯೋತ್ಪಾದಕರೊಂದಿಗೆ ಇತ್ತೀಚೆಗೆ ಯಾವುದೇ ಎನ್‌ಕೌಂಟರ್‌ಗಳು ನಡೆದಿಲ್ಲ. ಭಯೋತ್ಪಾದಕರನ್ನು ಹಿಡಿಯಲು ಸುಧಾರಿತ ತಾಂತ್ರಿಕ ಮತ್ತು ಕಣ್ಗಾವಲು ಉಪಕರಣಗಳನ್ನು ಬಳಸಲಾಗುತ್ತಿದೆ ಎಂದರು.

ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದ ನಂತರ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ತಂಡವು ಕಲಾಕೋಟ್‌ನ ಬ್ರೋ ಮತ್ತು ಸೂಮ್ ಅರಣ್ಯ ಪ್ರದೇಶಗಳನ್ನು ಸುತ್ತುವರೆದಿದ್ದರಿಂದ ಕಾರ್ಯಾಚರಣೆ ಪ್ರಾರಂಭವಾಯಿತು. ಎನ್ ಕೌಂಟರ್ ವೇಳೆ ಭಯೋತ್ಪಾದಕರು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದು ಯೋಧರು ಮೇಲೆ ಗುಂಡು ಹಾರಿಸಿದರು. ಈ ವೇಳೆ ಇಬ್ಬರು ಸೇನಾ ಯೋಧರು ಗಾಯಗೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com