ಚಂದ್ರಬಾಬು ನಾಯ್ಡು ನ್ಯಾಯಾಂಗ ಬಂಧನ ಅ. 19 ರವರೆಗೆ ವಿಸ್ತರಿಸಿದ ಎಸಿಬಿ ಕೋರ್ಟ್

ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರ ನ್ಯಾಯಾಂಗ ಬಂಧನ ಅವಧಿಯನ್ನು ವಿಶೇಷ ನ್ಯಾಯಾಲಯ...
ಚಂದ್ರಬಾಬು ನಾಯ್ಡು
ಚಂದ್ರಬಾಬು ನಾಯ್ಡು

ಅಮರಾವತಿ: ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರ ನ್ಯಾಯಾಂಗ ಬಂಧನ ಅವಧಿಯನ್ನು ವಿಶೇಷ ನ್ಯಾಯಾಲಯ ಅಕ್ಟೋಬರ್ 19 ರವರೆಗೆ ವಿಸ್ತರಿಸಿದೆ.

ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ವಿಶೇಷ ನ್ಯಾಯಾಲಯವು  ನಾಯ್ಡು ಅವರ ನ್ಯಾಯಾಂಗ ಬಂಧನವನ್ನು ಮೂರನೇ ಬಾರಿಗೆ ಹದಿನೈದು ದಿನಗಳ ಕಾಲ ವಿಸ್ತರಿಸಿದೆ.

ನಾಯ್ಡು ಅವರ ಜಾಮೀನು ಅರ್ಜಿ ಮತ್ತು ಆಂಧ್ರಪ್ರದೇಶ ಪೊಲೀಸ್ ಸಿಐಡಿ ತನ್ನ ಕಸ್ಟಡಿಗೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಶುಕ್ರವಾರಕ್ಕೆ ಮುಂದೂಡಿದೆ.

ಸಿಐಡಿ ಪರವಾಗಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪಿ ಸುಧಾಕರ್ ರೆಡ್ಡಿ ಅವರು ವಾದ ಮಂಡಿಸಿದರೆ, ಮಾಜಿ ಮುಖ್ಯಮಂತ್ರಿ ಪರವಾಗಿ ಸುಪ್ರೀಂ ಕೋರ್ಟ್ ವಕೀಲ ಪ್ರಮೋದ್ ದುಬೆ ವಾದ ಮಂಡಿಸಿದರು.

ಸೆಪ್ಟೆಂಬರ್ 23 ಮತ್ತು 24 ರಂದು ನಡೆದ ಮೊದಲ ಎರಡು ದಿನಗಳ ಕಸ್ಟಡಿಯಲ್ ವಿಚಾರಣೆಯ ಸಂದರ್ಭದಲ್ಲಿ ಮಾಜಿ ಸಿಎಂ ತನಿಖಾಧಿಕಾರಿಗಳಿಗೆ ಸಹಕರಿಸದ ಕಾರಣ ಹೆಚ್ಚಿನ ವಿಚಾರಣೆಗಾಗಿ ಸಿಐಡಿ ಐದು ದಿನಗಳ ಪೊಲೀಸ್ ಕಸ್ಟಡಿಗೆ ನೀಡುವತೆ ಕೋರಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com