ಮಣಿಪುರ: ಇಂಫಾಲದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ, ಎರಡು ಮನೆಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಮಣಿಪುರದ ಇಂಫಾಲ ಜಿಲ್ಲೆಯಲ್ಲಿ ಹೊಸ ಹಿಂಸಾಚಾರ ಭುಗಿಲೆದ್ದಿದ್ದು, ಕನಿಷ್ಠ ಎರಡು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಮತ್ತು ಹಲವಾರು ಸುತ್ತು ಗುಂಡುಗಳನ್ನು ಹಾರಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಇಂಫಾಲ: ಮಣಿಪುರದ ಇಂಫಾಲ ಜಿಲ್ಲೆಯಲ್ಲಿ ಹೊಸ ಹಿಂಸಾಚಾರ ಭುಗಿಲೆದ್ದಿದ್ದು, ಕನಿಷ್ಠ ಎರಡು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಮತ್ತು ಹಲವಾರು ಸುತ್ತು ಗುಂಡುಗಳನ್ನು ಹಾರಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಪಟ್ಸೋಯಿ ಪೊಲೀಸ್ ಠಾಣೆ ವ್ಯಾಪ್ತಿಯ ನ್ಯೂ ಕೀಥೆಲ್ಮನ್ಬಿಯಲ್ಲಿ ಈ ಘಟನೆ ನಡೆದಿದೆ.

ದಾಳಿಯ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಈ ಪ್ರದೇಶದಲ್ಲಿ ಉದ್ವಿಗ್ನತೆ ಉಂಟುಮಾಡಿದೆ ಎಂದು ಅವರು ಹೇಳಿದರು.

ಭದ್ರತಾ ಪಡೆಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ನಂತರ ಈ ಪ್ರದೇಶದಲ್ಲಿ ಜಮಾಯಿಸಿದ ಮೈತೇಯಿ ಸಮುದಾಯದ ಮಹಿಳೆಯರ ಗುಂಪನ್ನು ಭದ್ರತಾ ಪಡೆಗಳು ಮುಂದೆ ಸಾಗದಂತೆ ತಡೆದಿವೆ. ಹೆಚ್ಚುವರಿ ಭದ್ರತೆಯನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 3ರಂದು ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳು ಪ್ರಾರಂಭವಾದಾಗಿನಿಂದ 180ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ. 

ಮಣಿಪುರದ ಜನಸಂಖ್ಯೆಯ ಶೇ 53ರಷ್ಟಿರುವ ಮೈತೇಯಿ ಸಮುದಾಯವು ಇಂಫಾಲ ಕಣಿವೆಯಲ್ಲಿ ಹೆಚ್ಚಾಗಿ ವಾಸಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com