ಸಿಕ್ಕಿಂ ಪ್ರವಾಹ: ಮೃತರ ಸಂಖ್ಯೆ 14ಕ್ಕೆ ಏರಿಕೆ, 23 ಸೇನಾ ಸಿಬ್ಬಂದಿ ಸೇರಿ 102 ಮಂದಿ ನಾಪತ್ತೆ; ಮುಂದುವರಿದ ಶೋಧ ಕಾರ್ಯ

ಉತ್ತರ ಸಿಕ್ಕಿಂನ ಲೊನಾಕ್ ಸರೋವರದಲ್ಲಿ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯ ಜಲಾನಯನ ಪ್ರದೇಶದಲ್ಲಿ ಉಂಟಾದ ಹಠಾತ್ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದು, 23 ಸೇನಾ ಸಿಬ್ಬಂದಿ ಸೇರಿ 102 ಜನ ನಾಪತ್ತೆಯಾಗಿದ್ದಾರೆ.  ಕಣ್ಮರೆಯಾದವರಿಗಾಗಿ ರಕ್ಷಣಾ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಸಿಕ್ಕಿಂ ಪ್ರವಾಹ
ಸಿಕ್ಕಿಂ ಪ್ರವಾಹ

ಗ್ಯಾಂಗ್ಟೋಕ್: ಉತ್ತರ ಸಿಕ್ಕಿಂನ ಲೊನಾಕ್ ಸರೋವರದಲ್ಲಿ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯ ಜಲಾನಯನ ಪ್ರದೇಶದಲ್ಲಿ ಉಂಟಾದ ಹಠಾತ್ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದು, 23 ಸೇನಾ ಸಿಬ್ಬಂದಿ ಸೇರಿ 102 ಜನ ನಾಪತ್ತೆಯಾಗಿದ್ದಾರೆ.  ಕಣ್ಮರೆಯಾದವರಿಗಾಗಿ ರಕ್ಷಣಾ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇಲ್ಲಿಯವರೆಗೆ, 2,011 ಜನರನ್ನು ರಕ್ಷಿಸಲಾಗಿದೆ, ಆದರೆ ಬುಧವಾರ ಸಂಭವಿಸಿದ ವಿಪತ್ತು 22,034 ಜನರ ಮೇಲೆ ಪರಿಣಾಮ ಬೀರಿದೆ ಎಂದು ಸಿಕ್ಕಿಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (SSDMA) ತನ್ನ ಇತ್ತೀಚಿನ ಬುಲೆಟಿನ್‌ನಲ್ಲಿ ತಿಳಿಸಿದೆ.

ರಾಜ್ಯ ಸರ್ಕಾರವು ನಾಲ್ಕು ಪೀಡಿತ ಜಿಲ್ಲೆಗಳಲ್ಲಿ 26 ಪರಿಹಾರ ಶಿಬಿರಗಳನ್ನು ಸ್ಥಾಪಿಸಿದೆ ಎಂದು ಅದು ಹೇಳಿದೆ. ಗ್ಯಾಂಗ್ಟಾಕ್ ಜಿಲ್ಲೆಯ ಎಂಟು ಪರಿಹಾರ ಶಿಬಿರಗಳಲ್ಲಿ ಒಟ್ಟು 1,025 ಜನರು ಆಶ್ರಯ ಪಡೆಯುತ್ತಿದ್ದಾರೆ.

ಪ್ರವಾಹದಿಂದಾಗಿ ರಾಜ್ಯದಲ್ಲಿ 11 ಸೇತುವೆಗಳು ನಾಶವಾಗಿದ್ದು, ಮಂಗನ್ ಜಿಲ್ಲೆಯೊಂದರಲ್ಲೇ ಎಂಟು ಸೇತುವೆಗಳು ಕೊಚ್ಚಿ ಹೋಗಿವೆ. ನಾಮ್ಚಿಯಲ್ಲಿ ಎರಡು ಸೇತುವೆಗಳು ಮತ್ತು ಗ್ಯಾಂಗ್‌ಟಾಕ್‌ನಲ್ಲಿ ಒಂದು ಸೇತುವೆಗಳು ನಾಶವಾಗಿವೆ. ನಾಲ್ಕು ಪೀಡಿತ ಜಿಲ್ಲೆಗಳಲ್ಲಿ ನೀರಿನ ಪೈಪ್‌ಲೈನ್‌ಗಳು, ಒಳಚರಂಡಿ ಮಾರ್ಗಗಳು ಮತ್ತು 277 ಮನೆಗಳು ಹಾನಿಗೊಳಗಾಗಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com