ಜ್ಞಾನವಾಪಿ ಮಸೀದಿ (ಸಂಗ್ರಹ ಚಿತ್ರ)
ದೇಶ
ಜ್ಞಾನವಾಪಿ ಮಸೀದಿ ಸಮೀಕ್ಷೆ ಪೂರ್ಣಗೊಳಿಸಲು ಇನ್ನೂ 4 ವಾರ ಕಾಲಾವಕಾಶ ನೀಡಿದ ಕೋರ್ಟ್
ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲು ವಾರಣಾಸಿ ನ್ಯಾಯಾಲಯ ಗುರುವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಇನ್ನೂ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ...
ವಾರಣಾಸಿ: ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲು ವಾರಣಾಸಿ ನ್ಯಾಯಾಲಯ ಗುರುವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಇನ್ನೂ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ ಮತ್ತು ಈ ಅವಧಿಯನ್ನು ಮತ್ತೆ ವಿಸ್ತರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ಎಎಸ್‌ಐ) ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶ ಎ ಕೆ ವಿಶ್ವೇಶ್ ಅವರಿಗೆ, ಸಮೀಕ್ಷೆಯ ಅವಧಿಯನ್ನು ಇನ್ನೂ ನಾಲ್ಕು ವಾರಗಳವರೆಗೆ ವಿಸ್ತರಿಸುವಂತೆ ಸರ್ಕಾರಿ ವಕೀಲ ರಾಜೇಶ್ ಮಿಶ್ರಾ ಅವರು ಮನವಿ ಮಾಡಿದರು.
ಅಕ್ಟೋಬರ್ 6ರೊಳಗೆ ಸಮೀಕ್ಷೆಯ ವರದಿ ಸಲ್ಲಿಸಬೇಕಿದ್ದ ಎಎಸ್‌ಐ ಇದೀಗ ನವೆಂಬರ್ 6ರ ವರೆಗೆ ಕಾಲಾವಕಾಶ ಪಡೆದುಕೊಂಡಿದೆ.
ASI ಇಲ್ಲಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆ ನಡೆಸುತ್ತಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ