ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಉಚಿತ ಕೊಡುಗೆಗಳು: ಕೇಂದ್ರ ಸರ್ಕಾರ, ಇಸಿಗೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣೆ ಹೂಸ್ತಿಲಲ್ಲಿರುವ ಮಧ್ಯ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಉಚಿತ ಕೊಡುಗೆಗಳ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ನೀಡಿದೆ. 
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್

ನವದೆಹಲಿ: ಚುನಾವಣೆ ಹೂಸ್ತಿಲಲ್ಲಿರುವ ಮಧ್ಯ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಉಚಿತ ಕೊಡುಗೆಗಳ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ನೋಟಿಸ್ ನೀಡಿದೆ. 

ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರಿಗೆ ಲಂಚ ನೀಡಲು ತೆರಿಗೆದಾರರ ಹಣವನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆಯಲ್ಲಿ ಸುಪ್ರೀಂ ಕೋರ್ಟ್ ಈ ನೋಟಿಸ್ ಜಾರಿ ಮಾಡಿತು. 

ಮತದಾರರಿಗೆ ತೆರಿಗೆ ಹಣದಲ್ಲಿ ಉಚಿತವಾಗಿ ಕೊಡುಗೆಗಳನ್ನು ನೀಡುತ್ತಿರುವುದನ್ನು ವಿರೋಧಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಪ್ರತಿಕ್ರಿಯಿಸುವಂತೆ ಮಧ್ಯ ಪ್ರದೇಶ ಹಾಗೂ ರಾಜಸ್ಥಾನ ಸರ್ಕಾರಕ್ಕೂ ಸುಪ್ರೀಂಕೋರ್ಟ್ ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಕೇಂದ್ರ, ಚುನಾವಣಾ ಆಯೋಗ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್‌ಗೆ ನೋಟಿಸ್ ಜಾರಿ ಮಾಡಿದ್ದು, ತೆರಿಗೆದಾರರ ಹಣವನ್ನು ಎರಡು ರಾಜ್ಯ ಸರ್ಕಾರಗಳು ಮತದಾರರ ಆಮಿಷಕ್ಕೆ ಬಳಸಿಕೊಳ್ಳುತ್ತಿವೆ ಎಂದು ಆರೋಪಿಸಿತು. 

ಸರ್ಕಾರ ಚುನಾವಣೆಗೂ ಮುನ್ನ ಹಣ ಹಂಚುವುದಕ್ಕಿಂತ ಕ್ರೂರವಾದ ಸಂಗತಿ ಇನ್ನೊಂದಿಲ್ಲ. ಇದು ಪ್ರತಿ ಬಾರಿಯೂ ನಡೆಯುತ್ತಿದ್ದು, ಅಂತಿಮವಾಗಿ ತೆರಿಗೆದಾರರ ಮೇಲೆ ಹೊರೆ ಬೀಳುತ್ತದೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದರು.

ನಾಲ್ಕು ವಾರಗಳಲ್ಲಿ ನೋಟಿಸ್ ಗೆ ಪ್ರತಿಕ್ರಿಯಿಸುವಂತೆ  ಪೀಠ ಹೇಳಿದೆ. ಭಟ್ತುಲಾಲ್ ಜೈನ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ, ಈ ವಿಷಯದ ಕುರಿತು ಬಾಕಿ ಉಳಿದಿರುವ ಅರ್ಜಿಯೊಂದಿಗೆ ಅದನ್ನು ಸೇರಿಸಲು ಆದೇಶಿಸಿತು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com