ಸಿಕ್ಕಿಂ ಪ್ರವಾಹ: ಮೃತರ ಸಂಖ್ಯೆ 40ಕ್ಕೆ ಏರಿಕೆ, ಸಂಕಷ್ಟದಲ್ಲಿರುವ ಸಾವಿರಾರು ಜನರನ್ನು ರಕ್ಷಿಸಲು ಸೇನೆ ಏರ್ ಲಿಫ್ಟ್ ವ್ಯವಸ್ಥೆ!

ಈಶಾನ್ಯ ರಾಜ್ಯ ಸಿಕ್ಕಿಂನಲ್ಲಿ ಮೇಘಸ್ಪೋಟ ಹಾಗೂ ಹಠಾತ್ ಪ್ರವಾಹದಿಂದಾಗಿ ಕನಿಷ್ಠ 40 ಜನರು ಸಾವನ್ನಪ್ಪಿದ್ದು, ಸಂಕಷ್ಟಕ್ಕೆ ಸಿಲುಕಿರುವ ಸಾವಿರಾರು ಜನರನ್ನು ಹೆಲಿಕಾಪ್ಟರ್ ಮೂಲಕ ರಕ್ಷಿಸಲು ಸೇನೆ ವ್ಯವಸ್ಥೆ ಮಾಡಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಉತ್ತರ ಸಿಕ್ಕಿಂನಲ್ಲಿ ಪ್ರವಾಹದಿಂದ ತುಂಬಿ ಹರಿಯುತ್ತಿರುವ ತೀಸ್ತಾ ನದಿ
ಉತ್ತರ ಸಿಕ್ಕಿಂನಲ್ಲಿ ಪ್ರವಾಹದಿಂದ ತುಂಬಿ ಹರಿಯುತ್ತಿರುವ ತೀಸ್ತಾ ನದಿ
Updated on

ಸಿಕ್ಕಿಂ: ಈಶಾನ್ಯ ರಾಜ್ಯ ಸಿಕ್ಕಿಂನಲ್ಲಿ ಮೇಘಸ್ಪೋಟ ಹಾಗೂ ಹಠಾತ್ ಪ್ರವಾಹದಿಂದಾಗಿ ಕನಿಷ್ಠ 40 ಜನರು ಸಾವನ್ನಪ್ಪಿದ್ದು, ಸಂಕಷ್ಟಕ್ಕೆ ಸಿಲುಕಿರುವ ಸಾವಿರಾರು ಜನರನ್ನು ಹೆಲಿಕಾಪ್ಟರ್ ಮೂಲಕ ರಕ್ಷಿಸಲು ಸೇನೆ ವ್ಯವಸ್ಥೆ ಮಾಡಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಚೀನಾ ಮತ್ತು ನೇಪಾಳದೊಂದಿಗಿನ ಭಾರತದ ಗಡಿಯ ಸಮೀಪವಿರುವ ಪರ್ವತದಲ್ಲಿನ ಬೃಹತ್ ನೀರ್ಗಲ್ಲು ಒಡೆದ ನಂತರ ಸಿಕ್ಕಿಂನಲ್ಲಿ ಪ್ರವಾಹ ಉಂಟಾಗಿದ್ದು, ಅಪಾರ ಪ್ರಮಾಣದಲ್ಲಿ ಸಾವು, ನೋವು, ಆಸ್ತಿ ಪಾಸ್ತಿ ನಷ್ಟ ಸಂಭವಿಸಿದೆ. 

ಜಾಗತಿಕ ತಾಪಮಾನ ಏರಿಕೆ ಮತ್ತು ಮಂಜುಗಡ್ಡೆ ಕರಗಿದಂತೆ ಹಿಮಾಲಯದಾದ್ಯಂತ ಹೆಚ್ಚಾಗುತ್ತಿರುವುದು ಅಪಾಯಕಾರಿಯಾಗಿದೆ ಎಂದು ಹವಾಮಾನ ವಿಜ್ಞಾನಿಗಳು ಎಚ್ಚರಿಸಿದ್ದಾರೆ. ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿ, ರಾತ್ರೋರಾತ್ರಿ ಹೆಚ್ಚಿನ ಮೃತದೇಹಗಳನ್ನು ಹೊರತೆಗೆದಿದ್ದಾರೆ. 19 ಜನರ ಸಾವನ್ನು ತಮ್ಮ ಕಚೇರಿಗೆ ದೃಢಪಡಿಸಿದೆ ಎಂದು ಸಿಕ್ಕಿಂ ರಾಜ್ಯದ ಉನ್ನತಾಧಿಕಾರಿ ವಿಬಿ ಪಾಠಕ್ ಎಎಫ್‌ಪಿಗೆ ತಿಳಿಸಿದ್ದಾರೆ. ಕಳೆದ ಮೂರು ದಿನಗಳಲ್ಲಿ ತಮ್ಮ ರಾಜ್ಯದಲ್ಲಿ ಹೆಚ್ಚುವರಿ 21 ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ನೆರೆಯ ಪಶ್ಚಿಮ ಬಂಗಾಳದ ಜಿಲ್ಲಾ ಮ್ಯಾಜಿಸ್ಟ್ರೇಟ್ ಶಮಾ ಪರ್ವೀನ್ ತಿಳಿಸಿದ್ದಾರೆ.

ರಾಜ್ಯದಾದ್ಯಂತ ರಸ್ತೆಗಳು, ಸೇತುವೆಗಳು ಮತ್ತು ಟೆಲಿಫೋನ್ ಲೈನ್‌ಗಳು ನಾಶವಾಗಿವೆ, ಸ್ಥಳಾಂತರಗೊಳಿಸುವಿಕೆ ಮತ್ತು ದೇಶದ ಉಳಿದ ಭಾಗಗಳಿಂದ ಸಂಪರ್ಕ ಕಡಿತಗೊಂಡ ಸಾವಿರಾರು ಜನರೊಂದಿಗೆ ಸಂವಹನ ನಡೆಸುವ ಪ್ರಯತ್ನ ನಡೆಯುತ್ತಿದೆ.

ಶಾಲೆಗಳು, ಸರ್ಕಾರಿ ಕಚೇರಿಗಳು ಮತ್ತು ಅತಿಥಿಗೃಹಗಳಲ್ಲಿ ಸ್ಥಾಪಿಸಲಾದ ತಾತ್ಕಾಲಿಕ ಪರಿಹಾರ ಶಿಬಿರಗಳಲ್ಲಿ ಸುಮಾರು 8,000 ಇತರರು ಆಶ್ರಯ ಪಡೆದಿದ್ದಾರೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಪ್ರವಾಹ ಪ್ರೀಡಿತ ಪ್ರದೇಶದಲ್ಲಿ ಸಿಲುಕಿದ್ದ ಸುಮಾರು 1,500 ಜನರನ್ನು ಸೈನಿಕರು ರಕ್ಷಿಸಿದ್ದಾರೆ. ಒಂದು ವೇಳೆ ಹವಾಮಾನ ಪರಿಸ್ಥಿತಿ ಸುಧಾರಿಸಿದರೆ ಹೆಲಿಕಾಪ್ಟರ್ ಮೂಲಕ ಪ್ರವಾಸಿಗರನ್ನು ರಕ್ಷಿಸಲು ಯೋಜನೆ ರೂಪಿಸಲಾಗಿದೆಎಂದು ಭಾರತೀಯ ಸೇನೆ ಹೇಳಿಕೆಯಲ್ಲಿ ತಿಳಿಸಿದೆ. 

ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಸೇನೆ ಹೆಲಿಕಾಪ್ಟರ್ ಗಳು  ನೆರವು ನೀಡುತ್ತಿವೆ. ಪರಿಹಾರ ಸಾಮಗ್ರಿಗಳನ್ನು ಒದಗಿಸಲು ಮತ್ತು ಮೂಲಸೌಕರ್ಯಗಳನ್ನು ಪುನಃಸ್ಥಾಪಿಸಲು ನಾವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಕೇಂದ್ರ ಸರ್ಕಾರ ಪರಿಹಾರ ಕಾರ್ಯಕ್ಕಾಗಿ ಹಣವನ್ನು ತ್ವರಿತಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಂತ್ರಸ್ತರಿಗೆ ಸಾಧ್ಯವಾದ ಎಲ್ಲಾ ಬೆಂಬಲದ ಎಂದು ಭರವಸೆ ನೀಡಿದ್ದಾರೆ ಎಂದು ಪಠಾಕ್ ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com