ಜಾತಿ ಸಮೀಕ್ಷೆ ನಡೆಸಲು ರಾಜಸ್ಥಾನ ಸರ್ಕಾರ ಆದೇಶ
ಜೈಪುರ: ರಾಜ್ಯದಲ್ಲಿ ಜಾತಿ ಸಮೀಕ್ಷೆ ನಡೆಸಲು ರಾಜಸ್ಥಾನ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ಇದರೊಂದಿಗೆ ರಾಜಸ್ಥಾನ, ಬಿಹಾರ ನಂತರ ಜನಗಣತಿ ನಡೆಸುತ್ತಿರುವ ದೇಶದ ಎರಡನೇ ರಾಜ್ಯವಾಗಲಿದೆ.
ಬಿಹಾರ ತನ್ನ ಜಾತಿ ಸಮೀಕ್ಷೆಯ ಫಲಿತಾಂಶ ಬಿಡುಗಡೆ ಮಾಡಿದ ಕೆಲವೇ ದಿನಗಳಲ್ಲಿ ಮತ್ತು ರಾಜಸ್ಥಾನದಲ್ಲಿ ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ರಾಜಸ್ಥಾನ ಕಾಂಗ್ರೆಸ್ ಸರ್ಕಾರ ಈ ಆದೇಶ ಹೊರಡಿಸಿದೆ.
ರಾಜ್ಯ ಸಚಿವ ಸಂಪುಟದ ಒಪ್ಪಿಗೆ ಬಳಿಕ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಈ ಆದೇಶ ಹೊರಡಿಸಿದೆ. ಆದೇಶದ ಪ್ರಕಾರ, ರಾಜಸ್ಥಾನ ಸರ್ಕಾರ ತನ್ನ ಎಲ್ಲಾ ನಾಗರಿಕರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಗುಣಮಟ್ಟಗಳಿಗೆ ಸಂಬಂಧಿಸಿದ ಮಾಹಿತಿ ಮತ್ತು ಅಂಕಿಅಂಶಗಳನ್ನು ಸಂಗ್ರಹಿಸಲು ತನ್ನದೇ ಆದ ಸಂಪನ್ಮೂಲಗಳೊಂದಿಗೆ ಸಮೀಕ್ಷೆ ನಡೆಸುತ್ತಿದೆ.
ಆದಾಗ್ಯೂ, ಈ ಆದೇಶವು ಜನ ಗಣತಿ ನಡೆಸಲು ಸಮಯದ ಚೌಕಟ್ಟನ್ನು ಒದಗಿಸಿಲ್ಲ. ಇದಕ್ಕೂ ಮುನ್ನ ಜಾತಿ ಗಣತಿ ಕುರಿತು ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಸುದ್ದಿಗಾರರಿಗೆ ತಿಳಿಸಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ