ಕೊಲ್ಕತ್ತಾ: 3ನೇ ದಿನಕ್ಕೆ ಕಾಲಿಟ್ಟ ಟಿಎಂಸಿಯ ಅನಿರ್ದಿಷ್ಟಾವಧಿ ಧರಣಿ!

ಹಿರಿಯ ನಾಯಕ ಅಭಿಷೇಕ್ ಬ್ಯಾನರ್ಜಿ ನೇತೃತ್ವದಲ್ಲಿ ಪಶ್ಚಿಮ ಬಂಗಾಳದ ರಾಜಭವನದ ಹೊರಗೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಅಭಿಷೇಕ್ ಬ್ಯಾನರ್ಜಿ ನೇತೃತ್ವದಲ್ಲಿ ಪ್ರತಿಭಟನೆ
ಅಭಿಷೇಕ್ ಬ್ಯಾನರ್ಜಿ ನೇತೃತ್ವದಲ್ಲಿ ಪ್ರತಿಭಟನೆ

ಕೊಲ್ಕತ್ತಾ: ಹಿರಿಯ ನಾಯಕ ಅಭಿಷೇಕ್ ಬ್ಯಾನರ್ಜಿ ನೇತೃತ್ವದಲ್ಲಿ ಪಶ್ಚಿಮ ಬಂಗಾಳದ ರಾಜಭವನದ ಹೊರಗೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಪ್ರತಿಭಟನಾ ಸ್ಥಳದಲ್ಲಿ ರಾಜ್ಯಪಾಲ ಸಿ ವಿ ಆನಂದ ಬೋಸ್ ಅವರನ್ನು ಭೇಟಿಯಾಗುವವರೆಗೂ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ. ಟಿಎಂಸಿ ನಾಯಕ ಡೆರೆಕ್ ಒ'ಬ್ರಿಯಾನ್ ಅವರಿಂದ ಇಮೇಲ್ ಮನವಿ ಸ್ವೀಕರಿಸಿದ ನಂತರ ಸಂಜೆ 5.30 ಕ್ಕೆ ಡಾರ್ಜಿಲಿಂಗ್‌ನಲ್ಲಿ ನಿಯೋಗವನ್ನು ಭೇಟಿ ಮಾಡಲು ಬೋಸ್ ಒಪ್ಪಿಕೊಂಡಿದ್ದಾರೆ ಎಂದು ರಾಜಭವನದ ಮೂಲಗಳು ತಿಳಿಸಿವೆ.

ಪಶ್ಚಿಮ ಬಂಗಾಳದ ಮನ್ರೇಗಾ ಬಾಕಿಯನ್ನು ಕೇಂದ್ರದಿಂದ ಬಿಡುಗಡ ಮಾಡಬೇಕು ಮತ್ತು ಬೋಸ್ ಅವರೊಂದಿಗೆ ಮಾತುಕತೆ ನಡೆಸಬೇಕೆಂಬ ಬೇಡಿಕೆಯನ್ನಿಟ್ಟು ಬ್ಯಾನರ್ಜಿ ನೇತೃತ್ವದ ಟಿಎಂಸಿ ಧರಣಿ ನಡೆಸುತ್ತಿರುವುದರಿಂದ ನಿಯೋಗವನ್ನು ಭೇಟಿಯಾಗಲು ರಾಜ್ಯಪಾಲರು ನಿರ್ಧರಿಸಿದ್ದಾರೆ. ಆದಾಗ್ಯೂ, ರಾಜಭವನದ ಹೊರಗಿನ ಪ್ರತಿಭಟನಾ ಸ್ಥಳದಲ್ಲಿ ಬೋಸ್ ಪ್ರತಿಭಟನಾಕಾರರನ್ನು ಭೇಟಿಯಾಗುವವರೆಗೂ ಹೋರಾಟ ಮುಂದುವರಿಯುತ್ತದೆ ಎಂದು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಎಂಜಿಎನ್‌ಆರ್‌ಇಜಿಎ ಬಾಕಿಯನ್ನು ಕೇಂದ್ರವು ತಡೆಹಿಡಿದಿರುವುದನ್ನು ಪ್ರತಿಭಟಿಸಿ ಬೃಹತ್ ಸಂಖ್ಯೆಯ ಪಕ್ಷದ ಸದಸ್ಯರು ಮತ್ತು ಹಿರಿಯ ನಾಯಕರು ಐತಿಹಾಸಿಕ ಬ್ರಿಟಿಷರ ಕಾಲದ ಕಟ್ಟಡಕ್ಕೆ ಮೆರವಣಿಗೆ ನಡೆಸಿದ ನಂತರ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಗುರುವಾರ ಧರಣಿ ಪ್ರತಿಭಟನೆಯನ್ನು ಪ್ರಾರಂಭಿಸಿದರು. ಪಕ್ಷದ ನೂರಾರು ಕಾರ್ಯಕರ್ತರೊಂದಿಗೆ ಕಳೆದ ಎರಡು ರಾತ್ರಿಗಳಿಂದ ಬ್ಯಾನರ್ಜಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com