10,12ನೇ ತರಗತಿ ಪರೀಕ್ಷೆ, ವಿದ್ಯಾರ್ಥಿಗಳು ವರ್ಷಕ್ಕೆ ಎರಡು ಬಾರಿ ಹಾಜರಾಗುವುದು ಕಡ್ಡಾಯವಲ್ಲ: ಧರ್ಮೇಂದ್ರ ಪ್ರಧಾನ್ 

10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗೆ ವಿದ್ಯಾರ್ಥಿಗಳು ವರ್ಷಕ್ಕೆ ಎರಡು ಬಾರಿ ಹಾಜರಾಗುವುದು ಕಡ್ಡಾಯವಲ್ಲ, ಒಂದೇ ಅವಕಾಶದ ಭಯದಿಂದ ಉಂಟಾಗುವ ಒತ್ತಡವನ್ನು ಕಡಿಮೆ ಮಾಡಲು ಈ ಆಯ್ಕೆಯನ್ನು ಪರಿಚಯಿಸಲಾಗುತ್ತಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್
Updated on

ನವದೆಹಲಿ: 10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗೆ ವಿದ್ಯಾರ್ಥಿಗಳು ವರ್ಷಕ್ಕೆ ಎರಡು ಬಾರಿ ಹಾಜರಾಗುವುದು ಕಡ್ಡಾಯವಲ್ಲ, ಒಂದೇ ಅವಕಾಶದ ಭಯದಿಂದ ಉಂಟಾಗುವ ಒತ್ತಡವನ್ನು ಕಡಿಮೆ ಮಾಡಲು ಈ ಆಯ್ಕೆಯನ್ನು ಪರಿಚಯಿಸಲಾಗುತ್ತಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಈ ವಿಷಯ ತಿಳಿಸಿದ ಪ್ರಧಾನ್, 'ಡಮ್ಮಿ ಶಾಲೆಗಳ' ವಿಷಯವನ್ನು ನಿರ್ಲಕ್ಷಿಸಲಾಗುವುದಿಲ್ಲ ಮತ್ತು ಅದರ ಬಗ್ಗೆ ಗಂಭೀರ ಚರ್ಚೆ ನಡೆಸುವ ಸಮಯ ಬಂದಿದೆ ಎಂದರು. 

ಜಿಇಇ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಂತೆ 10 ಮತ್ತು 12 ನೇ ತರಗತಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ವರ್ಷಕ್ಕೆ ಎರಡು ಬಾರಿ ಆಯ್ಕೆಯನ್ನು ಹೊಂದಿರುತ್ತಾರೆ. ಅವರು ಉತ್ತಮ ಅಂಕವನ್ನು ಆಯ್ಕೆ ಮಾಡಬಹುದು ಆದರೆ ಅದು ಸಂಪೂರ್ಣವಾಗಿ ಐಚ್ಛಿಕವಾಗಿರುತ್ತದೆ. ಯಾವುದೇ ಒತ್ತಾಯವಿಲ್ಲ. ಒಂದೇ ಅವಕಾಶದ ಭಯದಿಂದ ಉಂಟಾಗುವ ಒತ್ತಡವನ್ನು ಕಡಿಮೆ ಮಾಡಲು ಈ ಆಯ್ಕೆಯನ್ನು ಪರಿಚಯಿಸಲಾಗಿದ ಎಂಂದು ಅವರು ತಿಳಿಸಿದರು. 

ಯಾವುದೇ ವಿದ್ಯಾರ್ಥಿ ತಾನು ಸಂಪೂರ್ಣವಾಗಿ ಸಿದ್ಧನಾಗಿದ್ದೇನೆ ಮತ್ತು ಮೊದಲ ಹಂತದ ಪರೀಕ್ಷೆಯ ಅಂಕಗಳಿಂದ ತೃಪ್ತನಾಗಿದ್ದೇನೆ ಎಂದು ಭಾವಿಸಿದರೆ ಆತ ಮುಂದಿನ ಪರೀಕ್ಷೆಗಳಿಗೆ ಹಾಜರಾಗದಿರಲು ಆಯ್ಕೆ ಮಾಡಬಹುದು. ಯಾವುದೂ ಕಡ್ಡಾಯವಾಗಿರುವುದಿಲ್ಲ ಎಂದು ಅವರು ಹೇಳಿದರು.

ಆಗಸ್ಟ್‌ನಲ್ಲಿ ಶಿಕ್ಷಣ ಸಚಿವಾಲಯವು ಪ್ರಕಟಿಸಿದ ಹೊಸ ಪಠ್ಯಕ್ರಮ ಚೌಕಟ್ಟಿನ (ಎನ್‌ಸಿಎಫ್) ಪ್ರಕಾರ, ವಿದ್ಯಾರ್ಥಿಗಳು ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಕಷ್ಟು ಸಮಯ ಮತ್ತು ಅವಕಾಶವನ್ನು ಹೊಂದಿದ್ದಾರೆ ಮತ್ತು ಅತ್ಯುತ್ತಮ ಅಂಕಗಳನ್ನು ಉಳಿಸಿಕೊಳ್ಳುವ ಆಯ್ಕೆಯನ್ನು ಪಡೆಯಲು ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆ ನಡೆಸುವ ಯೋಜನೆಯ ಬಗ್ಗೆ ವಿದ್ಯಾರ್ಥಿಗಳಿಂದ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಪಡೆದಿದ್ದೇನೆ ಎಂದು ಪ್ರಧಾನ್ ಹೇಳಿದರು.

"ಹೊಸ ಪಠ್ಯಕ್ರಮ ಘೋಷಿಸಿದ ನಂತರ ವಿದ್ಯಾರ್ಥಿಗಳನ್ನು ಭೇಟಿ ಮಾಡಿದ್ದೇನೆ. ಅವರು ಇದನ್ನು ಶ್ಲಾಘಿಸಿದ್ದಾರೆ ಮತ್ತು ಆಲೋಚನೆಯಿಂದ ಸಂತೋಷಪಟ್ಟಿದ್ದಾರೆ. 2024 ರಿಂದ ವರ್ಷಕ್ಕೆ ಎರಡು ಬಾರಿ ಪರೀಕ್ಷೆಗಳನ್ನು ನಡೆಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com