ಉತ್ತರಾಖಂಡ: ನೈನಿತಾಲ್​ನಲ್ಲಿ ಕಂದಕಕ್ಕೆ ಉರುಳಿ ಬಿದ್ದ ಬಸ್, 7 ಮಂದಿ ಸಾವು

ಉತ್ತರಾಖಂಡದ ನೈನಿತಾಲ್ ಜಿಲ್ಲೆಯಲ್ಲಿ ಬಸ್'ವೊಂದು ಕಂದಕಕ್ಕೆ ಉರುಳಿದ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 28 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನೈನಿತಾಲ್ (ಉತ್ತರಾಖಂಡ): ಉತ್ತರಾಖಂಡದ ನೈನಿತಾಲ್ ಜಿಲ್ಲೆಯಲ್ಲಿ ಬಸ್'ವೊಂದು ಕಂದಕಕ್ಕೆ ಉರುಳಿದ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 28 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.

ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ. ಮೃತದೇಹಗಳನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಗಾಯಗೊಂಡ ಪ್ರಯಾಣಿಕರನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಅಧಿಕಾರಿಯೊಬ್ಬರು ಹೇಳಿದ್ದಾರೆ.

ಘಟನೆ ಕುರಿತು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ದುಃಖ ವ್ಯಕ್ತಪಡಿಸಿದ್ದು, ಸ್ಥಳೀಯ ಆಡಳಿತ ಮತ್ತು ಎಸ್‌ಡಿಆರ್‌ಎಫ್ ತಂಡದಿಂದ ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com