ಚೆನ್ನೈ: ಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ ಬಂಧಿತರಾಗಿರುವ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಸೋಮವಾರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಕ್ರಮ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಸೆಂಥಿಲ್ ಬಾಲಾಜಿಯನ್ನು ಪ್ರಸ್ತುತ ಇಲ್ಲಿನ ಪುಳಲ್ ಜೈಲಿನಲ್ಲಿ ಇರಿಸಲಾಗಿತ್ತು. ಈ ಹಿಂದೆ ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಸೆಂಥಿಲ್ ಬಾಲಾಜಿಗೆ ವೈದ್ಯರು ಆ್ಯಂಜಿಯೋಗ್ರಾಮ್ ಶಸ್ತ್ರಚಿಕಿತ್ಸೆ ನಡೆಸಿದ್ದರು.
ಇದೀಗ ಮತ್ತೆ ಅನಾರೋಗ್ಯದ ಕಾರಣ ಸೆಂಥಿಲ್ ಬಾಲಾಜಿ ಅವರನ್ನು ಸೋಮವಾರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಅವರನ್ನು ಜೈಲಿನಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಮೂಲಗಳು ವಿವರಿಸದೆ ತಿಳಿಸಿವೆ.
Advertisement