ಎಎಪಿ ಸಂಸದ ಸಂಜಯ್ ಸಿಂಗ್
ಎಎಪಿ ಸಂಸದ ಸಂಜಯ್ ಸಿಂಗ್

ದೆಹಲಿ ಅಬಕಾರಿ ನೀತಿ ಹಗರಣ: ಎಎಪಿ ಸಂಸದ ಸಂಜಯ್ ಸಿಂಗ್ ಇಡಿ ಕಸ್ಟಡಿ ಅವಧಿ ವಿಸ್ತರಣೆ

ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಆಮ್ ಆದ್ಮಿ ಪಕ್ಷದ(ಎಎಪಿ) ಸಂಸದ ಸಂಜಯ್ ಸಿಂಗ್ ಅವರ ಜಾರಿ ನಿರ್ದೇಶನಾಲಯ(ಇಡಿ)ದ ಕಸ್ಟಡಿಯನ್ನು ಮಂಗಳವಾರ ದೆಹಲಿ...

ನವದೆಹಲಿ: ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಆಮ್ ಆದ್ಮಿ ಪಕ್ಷದ(ಎಎಪಿ) ಸಂಸದ ಸಂಜಯ್ ಸಿಂಗ್ ಅವರ ಜಾರಿ ನಿರ್ದೇಶನಾಲಯ(ಇಡಿ)ದ ಕಸ್ಟಡಿಯನ್ನು ಮಂಗಳವಾರ ದೆಹಲಿ ನ್ಯಾಯಾಲಯ ಅಕ್ಟೋಬರ್ 13(ಶುಕ್ರವಾರ) ವರೆಗೆ ವಿಸ್ತರಿಸಿದೆ.

ಕಳೆದ ವಾರ ದೆಹಲಿ ಕೋರ್ಟ್ ಎಎಪಿ ಸಂಸದರನ್ನು 5 ದಿನಗಳ ಕಾಲ ಇಡಿ ವಶಕ್ಕೆ ನೀಡಿ ಆದೇಶಿಸಿತ್ತು. ಇಡಿ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು ಆರೋಪಿಯನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂಕೆ ನಾಗ್ಪಾಲ್ ಅವರ ಮುಂದೆ ಹಾಜರುಪಡಿಸಿದರು.

ಆರೋಪಿಯ ವಿಚಾರಣೆ ನಡೆಸಿದ ಕೋರ್ಟ್, ಹೆಚ್ಚಿನ ವಿಚಾರಣೆಗಾಗಿ ಮತ್ತೆ ಮೂರು ದಿನ ಇಡಿ ವಶಕ್ಕೆ ನೀಡಿದೆ.

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಅಕ್ಟೋಬರ್ 4 ರಂದು ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು, ಸತತ 11 ಗಂಟೆಗಳ ವಿಚಾರಣೆ ಬಳಿಕ ಅವರನ್ನು ಬಂಧಿಸಿತ್ತು.

Related Stories

No stories found.

Advertisement

X
Kannada Prabha
www.kannadaprabha.com