ದೆಹಲಿ: ಎಎಪಿ ಶಾಸಕ ಅಮಾನತುಲ್ಲಾ ಖಾನ್‌ ಮನೆ ಮೇಲೆ ಇ.ಡಿ ದಾಳಿ, ಪರಿಶೀಲನೆ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಂಗಳವಾರ ಬೆಳಗ್ಗೆ ಎಎಪಿ ಶಾಸಕ ಅಮಾನತುಲ್ಲಾ ಖಾನ್‌ ಮನೆ ಮೇಲೆ ದಾಳಿ ನಡೆಸಿದೆ.
ಅಮಾನತುಲ್ಲಾಖಾನ್
ಅಮಾನತುಲ್ಲಾಖಾನ್
Updated on

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಂಗಳವಾರ ಬೆಳಗ್ಗೆ ಎಎಪಿ  ಶಾಸಕ ಅಮಾನತುಲ್ಲಾ ಖಾನ್‌ ಮನೆ ಮೇಲೆ ದಾಳಿ ನಡೆಸಿದೆ.

49 ವರ್ಷ ಅಮಾನತುಲ್ಲಾಖಾನ್ ದೆಹಲಿ ವಿಧಾನಸಭೆಯಲ್ಲಿ ಓಖ್ಲಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಮನಿ ಲಾಂಡರಿಂಗ್ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದೆ.

ದೆಹಲಿಯ ಭ್ರಷ್ಟಾಚಾರ ವಿರೋಧಿ ಸಂಸ್ಥೆ (ದೆಹಲಿ ಆ್ಯಂಟಿ ಕರಪ್ಷನ್‌ ಬ್ಯೂರೋ) ಸಲ್ಲಿಸಿದ ಎಫ್‌ಐಆರ್ ಮತ್ತು ಸಿಬಿಐ ದಾಖಲಿಸಿದ್ದ ಮತ್ತೊಂದು ಎಫ್‌ಐಆರ್‌ ಆಧರಿಸಿ ಇಡಿ ಕ್ರಮ ಕೈಗೊಂಡಿದೆ. ಅಮಾನತುಲ್ಲಾ ಖಾನ್‌ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ದೆಹಲಿ ವಕ್ಫ್‌ ಮಂಡಳಿಯಲ್ಲಿ ಅಕ್ರಮ ನೇಮಕಾತಿ ನಡೆದಿದ್ದು, ಭ್ರಷ್ಟಾಚಾರದಲ್ಲೂ ಭಾಗಿಯಾಗಿರುವ ಆರೋಪ ಕೇಳಿಬಂದಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಶೋಧ ನಡೆಸಲಾಗುತ್ತಿದೆ. ದೆಹಲಿಯ ವಕ್ಫ್‌ ಮಂಡಳಿಗೆ ಸಂಬಂಧಿಸಿದ ನೇಮಕಾತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿಂತೆ ವರ್ಷ ಎಸಿಬಿ ಅಮನತುಲ್ಲಾರನ್ನ ಬಂಧಿಸಿತ್ತು. ನಂತರ ಸೆಪ್ಟೆಂಬರ್ 2022ರಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com