ಜಮ್ಮು-ಕಾಶ್ಮೀರದ ಶೋಪಿಯಾನ್ ನಲ್ಲಿ ಎನ್ ಕೌಂಟರ್: ಇಬ್ಬರು ಎಲ್ ಇಟಿ ಉಗ್ರರ ಹತ್ಯೆ

ಲಷ್ಕರ್ ಇ ತೊಯ್ಬಾ ಸಂಘಟನೆಗೆ ಸೇರಿದ ಇಬ್ಬರು ಭಯೋತ್ಪಾದಕರು ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಮಂಗಳವಾರ ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೃತಪಟ್ಟಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಶೋಪಿಯಾನ್ (ಜಮ್ಮು-ಕಾಶ್ಮೀರ): ಲಷ್ಕರ್ ಇ ತೊಯ್ಬಾ ಸಂಘಟನೆಗೆ ಸೇರಿದ ಇಬ್ಬರು ಭಯೋತ್ಪಾದಕರು ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಮಂಗಳವಾರ ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೃತಪಟ್ಟಿದ್ದಾರೆ.

ಮೃತ ಉಗ್ರರನ್ನು ಮೊರಿಫತ್ ಮಕ್ಬೂಲ್ ಮತ್ತು ಜಾಸಿಮ್ ಫಾರೂಕ್ ಅಲಿಯಾಸ್ ಅಬ್ರರ್ ಎಂದು ಗುರುತಿಸಲಾಗಿದೆ. ಶೋಪಿಯಾನ್ ನ ಅಲ್ಶಿಪೊರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್ ಕೌಂಟರ್ ನಡೆಯಿತು.

ಉಗ್ರಗಾಮಿಗಳು ಇರುವ ಮಾಹಿತಿ ಪಡೆದ ಪೊಲೀಸರು ಉಗ್ರ ವಿರೋಧಿ ಕಾರ್ಯಾಚರಣೆ ನಡೆಸಿದ್ದ ವೇಳೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಭದ್ರತಾ ಪಡೆಗಳ ಗುಂಡಿನ ದಾಳಿಗೆ ಉಗ್ರರು ಬಲಿಯಾಗಿದ್ದಾರೆ. ಹೆಚ್ಚಿನ ವಿವರಗಳು ಸಿಕ್ಕಿಲ್ಲ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com