ಬಿಹಾರದಲ್ಲಿ ಹಳಿ ತಪ್ಪಿದ ನಾರ್ತ್‌ ಈಸ್ಟ್ ಸೂಪರ್‌ಫಾಸ್ಟ್ ರೈಲು; ಕನಿಷ್ಠ ನಾಲ್ವರು ಸಾವು

ಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದ ಸಮೀಪ ಬುಧವಾರ ರಾತ್ರಿ ನಾರ್ತ್‌ ಈಸ್ಟ್ ಸೂಪರ್‌ಫಾಸ್ಟ್ ರೈಲಿನ ಹಲವು ಬೋಗಿಗಳು ಹಳಿತಪ್ಪಿದ್ದು, ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದಾರೆ ಮತ್ತು ಹಲವರು...
ಹಳಿ ತಪ್ಪಿದ ನಾರ್ತ್‌ ಈಸ್ಟ್ ಸೂಪರ್‌ಫಾಸ್ಟ್ ರೈಲು
ಹಳಿ ತಪ್ಪಿದ ನಾರ್ತ್‌ ಈಸ್ಟ್ ಸೂಪರ್‌ಫಾಸ್ಟ್ ರೈಲು

ಬಕ್ಸರ್: ಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದ ಸಮೀಪ ಬುಧವಾರ ರಾತ್ರಿ ನಾರ್ತ್‌ ಈಸ್ಟ್ ಸೂಪರ್‌ಫಾಸ್ಟ್ ರೈಲಿನ ಹಲವು ಬೋಗಿಗಳು ಹಳಿತಪ್ಪಿದ್ದು, ಅಪಘಾತದಲ್ಲಿ ಕನಿಷ್ಠ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

ಆನಂದ್ ವಿಹಾರ್ ಟರ್ಮಿನಲ್‌ನಿಂದ ಕಾಮಾಕ್ಯಕ್ಕೆ ತೆರಳುತ್ತಿದ್ದ ನಾರ್ತ್ ಈಸ್ಟ್ ಸೂಪರ್‌ಫಾಸ್ಟ್ ರೈಲು ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದ ಬಳಿ ರಾತ್ರಿ 9:35 ಕ್ಕೆ ಹಳಿತಪ್ಪಿತು ಎಂದು ರೈಲ್ವೆ ಅಧಿಕಾರಿಯೊಬ್ಬರು ANI ಗೆ ತಿಳಿಸಿದ್ದಾರೆ.

ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ ತಂಡಗಳು ಘಟನಾ ಸ್ಥಳಕ್ಕೆ ತಲುಪಿವೆ ಎಂದು ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ಅವರು ಹೇಳಿದ್ದಾರೆ.

ನಾರ್ತ್‌ ಈಸ್ಟ್ ಸೂಪರ್‌ಫಾಸ್ಟ್ ರೈಲಿನ ಆರು ಬೋಗಿಗಳು ಪಲ್ಟಿಯಾಗಿ ಟ್ರ್ಯಾಕ್ ಮೇಲೆ ಬಿದ್ದಿವೆ ಎಂದು ವರದಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com