ಬಿಹಾರದಲ್ಲಿ ಹಳಿ ತಪ್ಪಿದ ನಾರ್ತ್‌ ಈಸ್ಟ್ ಸೂಪರ್‌ಫಾಸ್ಟ್ ರೈಲು

ಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದಲ್ಲಿ ಬುಧವಾರ ರಾತ್ರಿ ನಾರ್ತ್‌ ಈಸ್ಟ್ ಸೂಪರ್‌ಫಾಸ್ಟ್ ರೈಲಿನ ಮೂರು ಬೋಗಿಗಳು ಹಳಿತಪ್ಪಿವೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹಳಿ ತಪ್ಪಿದ ನಾರ್ತ್‌ ಈಸ್ಟ್ ಸೂಪರ್‌ಫಾಸ್ಟ್ ರೈಲು
ಹಳಿ ತಪ್ಪಿದ ನಾರ್ತ್‌ ಈಸ್ಟ್ ಸೂಪರ್‌ಫಾಸ್ಟ್ ರೈಲು

ಬಕ್ಸರ್: ಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದಲ್ಲಿ ಬುಧವಾರ ರಾತ್ರಿ ನಾರ್ತ್‌ ಈಸ್ಟ್ ಸೂಪರ್‌ಫಾಸ್ಟ್ ರೈಲಿನ ಮೂರು ಬೋಗಿಗಳು ಹಳಿತಪ್ಪಿವೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆನಂದ್ ವಿಹಾರ್ ಟರ್ಮಿನಲ್‌ನಿಂದ ಕಾಮಾಕ್ಯಕ್ಕೆ ತೆರಳುತ್ತಿದ್ದ ನಾರ್ತ್ ಈಸ್ಟ್ ಸೂಪರ್‌ಫಾಸ್ಟ್ ರೈಲು ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದಲ್ಲಿ ರಾತ್ರಿ 9:35 ಕ್ಕೆ ಹಳಿತಪ್ಪಿತು ಎಂದು ರೈಲ್ವೆ ಅಧಿಕಾರಿಯೊಬ್ಬರು ANI ಗೆ ತಿಳಿಸಿದ್ದಾರೆ.

ರೈಲು ಅಪಘಾತದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಪೂರ್ವ ಮಧ್ಯ ರೈಲ್ವೆ ವಲಯ ಎಎನ್ಐಗೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com