ಹರಿಯಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 4 ಉಪಮುಖ್ಯಮಂತ್ರಿ ಸ್ಥಾನ: ಹೂಡಾ ಭರವಸೆ

2024ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬಂದರೆ ಒಬ್ಬ ಬ್ರಾಹ್ಮಣ ಸಮುದಾಯದವರೂ ಸೇರಿದಂತೆ ನಾಲ್ವರು ಉಪಮುಖ್ಯಮಂತ್ರಿಗಳು ಇರುತ್ತಾರೆ ಎಂದು ಹರಿಯಾಣ ಹಿರಿಯ ಕಾಂಗ್ರೆಸ್ ನಾಯಕ ಭೂಪಿಂದರ್ ಸಿಂಗ್ ಹೂಡಾ ಅವರು...
ಭೂಪೇಂದ್ರ ಸಿಂಗ್ ಹೂಡಾ
ಭೂಪೇಂದ್ರ ಸಿಂಗ್ ಹೂಡಾ
Updated on

ಕರ್ನಾಲ್‌: 2024ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬಂದರೆ ಒಬ್ಬ ಬ್ರಾಹ್ಮಣ ಸಮುದಾಯದವರೂ ಸೇರಿದಂತೆ ನಾಲ್ವರು ಉಪಮುಖ್ಯಮಂತ್ರಿಗಳು ಇರುತ್ತಾರೆ ಎಂದು ಹರಿಯಾಣ ಹಿರಿಯ ಕಾಂಗ್ರೆಸ್ ನಾಯಕ ಭೂಪಿಂದರ್ ಸಿಂಗ್ ಹೂಡಾ ಅವರು ಗುರುವಾರ ಪುನರುಚ್ಚರಿಸಿದ್ದಾರೆ.

ಹರಿಯಾಣದಲ್ಲಿ ನಾಲ್ವರು ಉಪಮುಖ್ಯಮಂತ್ರಿಗಳನ್ನು ಹೊಂದಬಹುದು ಎಂದು ಮಾಜಿ ಮುಖ್ಯಮಂತ್ರಿ ಹೂಡಾ ನೀಡಿದ ಸಲಹೆಯನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕುಮಾರಿ ಸೆಲ್ಜಾ ಅವರು ಬುಧವಾರ ತಳ್ಳಿಹಾಕಿದ್ದರು.

ನಾಲ್ವರು ಉಪಮುಖ್ಯಮಂತ್ರಿಗಳನ್ನು ಹೊಂದುವ ಮಾತೇ ಇಲ್ಲ ಎಂದಿರುವ ಅವರು, ರಾಜ್ಯದ 36 ಸಮುದಾಯಗಳ ಪೈಕಿ ಮುಖ್ಯಮಂತ್ರಿ ಸ್ಥಾನ ಯಾರಿಗೂ ಮೀಸಲಲ್ಲದ ಕಾರಣ ಪಕ್ಷದ ಹೈಕಮಾಂಡ್ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಬೇಕು ಎಂದಿದ್ದರು.

ಸೆಲ್ಜಾ ಅವರ ಹೇಳಿಕೆಯ ಬಗ್ಗೆ ಕರ್ನಾಲ್‌ನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಹೂಡಾ, ಈ ವಿಷಯಗಳು ಚುನಾವಣಾ ಪ್ರಣಾಳಿಕೆಯ ಭಾಗವಾಗಿರವುದಿಲ್ಲ ಎಂದಿದ್ದಾರೆ.

ಈ ಹಿಂದೆ, 2019 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಹೂಡಾ ಹರಿಯಾಣದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ವಿವಿಧ ಸಮುದಾಯಗಳ ನಾಲ್ಕು ಉಪ ಮುಖ್ಯಮಂತ್ರಿಗಳನ್ನು ನೇಮಕ ಮಾಡಲಾಗುವುದು ಎಂದು ಭರವಸೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com