ದ್ರೌಪದಿ ಮುರ್ಮು
ದೇಶ
ಕಾಶ್ಮೀರ: ವೈಷ್ಣೋದೇವಿ ದರ್ಶನ ಪಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು
ಜಮ್ಮು ಮತ್ತು ಕಾಶ್ಮೀರ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುರುವಾರ ವೈಷ್ಣೋದೇವಿಯ ದೇಗುಲಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುರುವಾರ ವೈಷ್ಣೋದೇವಿಯ ದೇಗುಲಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ರಿಯಾಸಿ ಜಿಲ್ಲೆಯ ತ್ರಿಕೂಟ ಬೆಟ್ಟಗಳ ಮೇಲಿರುವ ದೇವಾಲಯದ ಸ್ಕೈವಾಕ್ ಯೋಜನೆ ಮತ್ತು ಮರುರೂಪಿಸಲಾದ ಪಾರ್ವತಿ ಭವನವನ್ನು ಉದ್ಘಾಟಿಸಿದರು.
"ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪವಿತ್ರ ಮಾತಾ ವೈಷ್ಣೋ ದೇವಿ ದೇಗುಲಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು ಮತ್ತು ಸ್ಕೈವಾಕ್ ಅನ್ನು ಉದ್ಘಾಟಿಸಿದರು" ಎಂದು ರಾಷ್ಟ್ರಪತಿ ಭವನ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ರಾಷ್ಟ್ರಪತಿ ಮುರ್ಮು ಅವರ ಜೊತೆಗಿದ್ದರು.
200 ಮೀಟರ್ ನ ಸ್ಕೈವಾಕ್ ಯಾತ್ರಿಕರ ಪ್ರಯಾಣವನ್ನು ಸುಗಮಗೊಳಿಸುತ್ತದೆ. ಇದು ಪಾರ್ವತಿ ಭವನ ಮತ್ತು ದೇಗುಲಕ್ಕೆ ಭೇಟಿ ನೀಡಿದ ನಂತರ ಹಿಂದಿರುಗುವ ಮಾರ್ಗವನ್ನು ಪ್ರತ್ಯೇಕಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ