ನವದೆಹಲಿ: ಒಟ್ಟು 471 ಭಾರತೀಯರನ್ನು ಹೊತ್ತು ಟೆಲ್ ಅವಿವ್‌ನಿಂದ ಹೊರಟ ಎರಡು ವಿಮಾನಗಳು ಭಾನುವಾರ ಬೆಳಗ್ಗೆ ರಾಷ್ಟ್ರ ರಾಜಧಾನಿ ದೆಹಲಿಗೆ ಸುರಕ್ಷಿತವಾಗಿ ಬಂದಿಳಿದಿವೆ.
ಏರ್ ಇಂಡಿಯಾ ಮತ್ತು ಸ್ಪೈಸ್ ಜೆಟ್‌ನ ವಿಮಾನಗಳು ಇಸ್ರೇಲ್‌ನಲ್ಲಿ ಸಿಲುಕಿದ್ದ ಭಾರತೀಯರನ್ನು ಕರೆತಂದಿವೆ.
ಅಕ್ಟೋಬರ್ 7 ರಂದು, ಹಮಾಸ್ ಬಂಡುಕೋರರು ಗಾಜಾ ಪಟ್ಟಿಯ ಸಮೀಪವಿರುವ ಇಸ್ರೇಲಿ ಪಟ್ಟಣಗಳಿಗೆ ಭೂಮಿ, ವಾಯು ಮತ್ತು ಸಮುದ್ರದ ಮೂಲಕ ಸಾವಿರಾರು ರಾಕೆಟ್‌ಗಳನ್ನು ಹಾರಿಸಿದರು. ಅಂದಿನಿಂದ ಇಸ್ರೇಲ್ ದಾಳಿಗೆ ಪ್ರತಿಯಾಗಿ ಹಮಾಸ್ ನಿಯಂತ್ರಿತ ಗಾಜಾ ಪಟ್ಟಿಯ ಮೇಲೆ ಭಾರಿ ಬಾಂಬ್ ದಾಳಿ ನಡೆಸುತ್ತಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಹಮಾಸ್ ಅನ್ನು 'ಪುಡಿಮಾಡಿ ನಾಶಪಡಿಸುವುದಾಗಿ' ಪ್ರತಿಜ್ಞೆ ಮಾಡಿದ್ದಾರೆ.
ಹೀಗಾಗಿ, ಇಸ್ರೇಲ್‌ನಲ್ಲಿ ಸಿಲುಕಿ, ಅಲ್ಲಿಂದ ವಾಪಸಾಗಲು ಬಯಸುವ ಭಾರತೀಯರಿಗೆ ಮರಳಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರವು ಪ್ರಾರಂಭಿಸಿದ 'ಆಪರೇಷನ್ ಅಜಯ್' ಅಡಿಯಲ್ಲಿ ಒಟ್ಟು ನಾಲ್ಕು ವಿಮಾನಗಳು ಕಾರ್ಯನಿರ್ವಹಿಸುತ್ತಿವೆ.
197 ಪ್ರಯಾಣಿಕರೊಂದಿಗೆ ಮೂರನೇ ವಿಮಾನವು ಬೆಳಿಗ್ಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಭಾನುವಾರ ಹೇಳಿದ್ದಾರೆ.
274 ಪ್ರಯಾಣಿಕರನ್ನು ಹೊಂದಿದ್ದ ನಾಲ್ಕನೇ ವಿಮಾನವು ರಾಷ್ಟ್ರ ರಾಜಧಾನಿಯನ್ನು ತಲುಪಿದೆ ಎಂದು ಅವರು ಸಾಮಾಜಿಕ ಮಾಧ್ಯಮ ವೇದಿಕೆ ಟ್ವಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ ಮತ್ತು ಪ್ರಯಾಣಿಕರ ಚಿತ್ರಗಳನ್ನು ಸಹ ಹಂಚಿಕೊಂಡಿದ್ದಾರೆ.
ಏರ್ ಇಂಡಿಯಾದ ಎರಡು ಚಾರ್ಟರ್ಡ್ ವಿಮಾನಗಳು ಟೆಲ್ ಅವಿವ್‌ನಿಂದ ಹೊರಟು ಶುಕ್ರವಾರ ಮತ್ತು ಶನಿವಾರದಂದು ಒಟ್ಟು 435ಕ್ಕೂ ಹೆಚ್ಚು ಭಾರತೀಯರನ್ನು ಕರೆತಂದಿವೆ.
Advertisement