ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಜಿಎನ್ ಖಯಾಲ್ ನಿಧನ

ಜಮ್ಮು ಮತ್ತು ಕಾಶ್ಮೀರದ ಹಿರಿಯ ಪತ್ರಕರ್ತ ಗುಲಾಂ ನಬಿ ಖಯಾಲ್ ಅವರು ಭಾನುವಾರ ಇಲ್ಲಿ ತಮ್ಮ ನಿವಾಸದಲ್ಲಿ ನಿಧನರಾದರು.
ಜಿಎನ್ ಖಯಾಲ್
ಜಿಎನ್ ಖಯಾಲ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹಿರಿಯ ಪತ್ರಕರ್ತ ಗುಲಾಂ ನಬಿ ಖಯಾಲ್ ಅವರು ಭಾನುವಾರ ಇಲ್ಲಿ ತಮ್ಮ ನಿವಾಸದಲ್ಲಿ ನಿಧನರಾದರು.

85 ವರ್ಷದ ಗುಲಾಂ ನಬಿ ಖಯಾಲ್ ಅವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಲಾಯಿತು. ಖಯಾಲ್ ಅವರ ‘ಗಾಶಿಕ್ ಮಿನಾರ್’ ಪುಸ್ತಕಕ್ಕಾಗಿ 1975ರಲ್ಲಿ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಾಯಿತು.

ಇಲ್ಲಿನ ತಮ್ಮ ನಿವಾಸದಲ್ಲಿ ಖಯಾಲ್ ಕೊನೆಯುಸಿರೆಳೆದಿದ್ದಾರೆ ಎಂದು ಖಯಾಲ್ ಸಂಬಂಧಿಕರೊಬ್ಬರು ತಿಳಿಸಿದ್ದಾರೆ. ಖಯಾಲ್ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಅವರ ಮಕ್ಕಳೆಲ್ಲ ವಿದೇಶದಲ್ಲಿ ನೆಲೆಸಿದ್ದಾರೆ.

ಖಯಾಲ್ ಅವರು 30ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. 1950ರ ದಶಕದಲ್ಲಿ 'ರೇಡಿಯೋ ಕಾಶ್ಮೀರ'ದಲ್ಲಿ ಸುದ್ದಿ ಓದುಗರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com