ಸದನದಲ್ಲಿ ಪ್ರಶ್ನೆ ಕೇಳಲು ಹಣ ಪಡೆದ ಆರೋಪ: ಆರೋಪ ನಿರಾಧಾರ, ಸಿಬಿಐ ತನಿಖೆಗೆ ರೆಡಿ ಎಂದ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ

ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಮಿತಿ ಅಥವಾ ಸಿಬಿಐ ವಿಚಾರಣೆಗೆ ತಾವು ಸಿದ್ಧ.. ತಮ್ಮ ವಿರುದ್ಧದ ಆರೋಪ ನಿರಾಧಾರ ಎಂದು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೋಯಿತ್ರಾ ಹೇಳಿದ್ದಾರೆ.
ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ
ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ

ನವದೆಹಲಿ: ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಮಿತಿ ಅಥವಾ ಸಿಬಿಐ ವಿಚಾರಣೆಗೆ ತಾವು ಸಿದ್ಧ.. ತಮ್ಮ ವಿರುದ್ಧದ ಆರೋಪ ನಿರಾಧಾರ ಎಂದು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೋಯಿತ್ರಾ ಹೇಳಿದ್ದಾರೆ.

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮಾಡಿರುವ ಗಂಭೀರ ಆರೋಪವನ್ನು ಟಿಎಂಸಿ ಸಂಸದೆ ನಿರಾಕರಿಸಿದ್ದು, ಸಿಬಿಐ ತನಿಖೆಗೂ ತಾವು ಸಿದ್ಧ. ಇದೊಂದು ಸುಳ್ಳು ಆರೋಪ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಟ್ವಿಟರ್ ನಲ್ಲಿ ಸರಣಿ ಪೋಸ್ಟ್​ ಮಾಡಿರುವ ಅವರು, ನಕಲಿ ಪದವೀಧರ ಮತ್ತು ಇತರ ಬಿಜೆಪಿ ದಿಗ್ಗಜರ ವಿರುದ್ಧ ಬಾಕಿ ಉಳಿದಿರುವ ಸಾಂವಿಧಾನಿಕ ಸವಲತ್ತುಗಳ ಉಲ್ಲಂಘನೆ ಪ್ರಕರಣವನ್ನು ಮೊದಲು ವಿಚಾರಣೆ ನಡೆಸಲಿ. ಬಳಿಕ ಸ್ಪೀಕರ್ ಅವರು ನನ್ನ ವಿರುದ್ಧದ ಆರೋಪವನ್ನು ವಿಚಾರಿಸಲಿ. ಜೊತೆಗೆ ಅದಾನಿ ಹಗರಣದಲ್ಲಿ ಇಡಿ ಮತ್ತು ಇತರ ತನಿಖಾ ಸಂಸ್ಥೆಗಳು ಎಫ್‌ಐಆರ್ ದಾಖಲಿಸಲು ಕಾಯುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

'ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗುತ್ತಿದೆ. ತಮ್ಮ ಮೇಲಿನ ಆರೋಪಕ್ಕೆ ಸಿಬಿಐ ತನಿಖೆಗೂ ತಾವು ಸಿದ್ಧ. ನಕಲಿ ಪದವೀಧರ ಮತ್ತು ಇತರ ಬಿಜೆಪಿ ದಿಗ್ಗಜರ ವಿರುದ್ಧ ಬಾಕಿ ಉಳಿದಿರುವ ಸಾಂವಿಧಾನಿಕ ಸವಲತ್ತುಗಳ ಉಲ್ಲಂಘನೆ ಪ್ರಕರಣವನ್ನು ಮೊದಲು ವಿಚಾರಣೆ ನಡೆಸಲಿ. ಬಳಿಕ ಸ್ಪೀಕರ್ ಅವರು ನನ್ನ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸಲಿ. ಜೊತೆಗೆ ಅದಾನಿ ಹಗರಣದಲ್ಲಿ ಇಡಿ ಮತ್ತು ಇತರ ತನಿಖಾ ಸಂಸ್ಥೆಗಳು ಎಫ್‌ಐಆರ್ ದಾಖಲಿಸಲು ನಾನು ಕಾಯುತ್ತಿದ್ದೇನೆ' ಎಂದು ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com