ಮಣಿಪುರ ಲೈಂಗಿಕ ದೌರ್ಜನ್ಯ ವೀಡಿಯೋ ಪ್ರಕರಣ: 7 ಮಂದಿ ವಿರುದ್ಧ ಸಿಬಿಐ ಚಾರ್ಜ್ ಶೀಟ್

ಮಣಿಪುರದಲ್ಲಿ ಲೈಂಗಿಕ ದೌರ್ಜನ್ಯದ ವೀಡಿಯೋ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ವಿರುದ್ಧ ಸಿಬಿಐ ಚಾರ್ಜ್ ಶೀಟ್ ದಾಖಲಿಸಿದೆ.
ಸಿಬಿಐ ಸಾಂದರ್ಭಿಕ ಚಿತ್ರ
ಸಿಬಿಐ ಸಾಂದರ್ಭಿಕ ಚಿತ್ರ

ನವದೆಹಲಿ: ಮಣಿಪುರದಲ್ಲಿ ಲೈಂಗಿಕ ದೌರ್ಜನ್ಯದ ವೀಡಿಯೋ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ವಿರುದ್ಧ ಸಿಬಿಐ ಚಾರ್ಜ್ ಶೀಟ್ ದಾಖಲಿಸಿದೆ.

ಈ ಪೈಕಿ ಓರ್ವ ಬಾಲಾಪರಾಧಿಯೂ ಇರುವುದು ಗಮನಾರ್ಹ, ಮಣಿಪುರದ ಕಾಂಗ್ಪೋಪಿ ಜಿಲ್ಲೆಯಲ್ಲಿ ಮೇ ತಿಂಗಳಲ್ಲಿ ಇಬ್ಬರು ಬುಡಕಟ್ಟು ಮಹಿಳೆಯರನ್ನು ನಗ್ನವಾಗಿ ಪರೇಡ್ ಮಾಡಲಾಗಿದ್ದ ವೀಡಿಯೋ ಬಹಿರಂಗಗೊಂಡಿತ್ತು.

ದೇಶ, ಜಾಗತಿಕವಾಗಿ ಈ ಘಟನೆಯನ್ನು ಖಂಡಿಸಲಾಗಿತ್ತು. ಸುಪ್ರೀಂ ಕೋರ್ಟ್ ಮಧ್ಯಪ್ರವೇಶದಿಂದಾಗಿ ಪ್ರಕರಣ ಸಿಬಿಐ ಗೆ ಹಸ್ತಾಂತರವಾಗಿತ್ತು. ಈಗ ತನಿಖಾ ಸಂಸ್ಥೆ 6 ಮಂದಿ ವಿರುದ್ಧ ಗುವಾಹಟಿಯ ಸಿಬಿಐ ವಿಶೇಷ ನ್ಯಾಯಾಲಯದ ಎದುರು ಆರೋಪ ಪಟ್ಟಿ ದಾಖಲಿಸಿದೆ. ಮೇ 4 ರಂದು, ಶಸ್ತ್ರಸಜ್ಜಿತವಾದ ಸುಮಾರು 900-1000 ವ್ಯಕ್ತಿಗಳ ಗುಂಪೊಂದು, ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯ ಬಿ ಫೈನೋಮ್ ಗ್ರಾಮಕ್ಕೆ ಪ್ರವೇಶಿಸಿ, ಮನೆಗಳನ್ನು ಧ್ವಂಸಗೊಳಿಸಿ, ಸುಟ್ಟುಹಾಕಿ, ಆಸ್ತಿಗಳನ್ನು ದೋಚಿತು, ಗ್ರಾಮಸ್ಥರ ಮೇಲೆ ಹಲ್ಲೆ, ಕೊಲೆಗಳು ಮತ್ತು ಲೈಂಗಿಕವಾಗಿ ದೌರ್ಜನ್ಯ ಎಸಗಿತು ಎಂದು ಆರೋಪಿಸಲಾಗಿದೆ. ಮಹಿಳೆಯರ ಮೇಲೆ ಹಲ್ಲೆ ನಡೆಸಿದರು.

ಈ ಘಟನೆಯಲ್ಲಿ ಮಹಿಳೆಯೊಬ್ಬರು ಬೆತ್ತಲೆಯಾಗಿ ಮೆರವಣಿಗೆ ನಡೆಸಿದ ಕುಟುಂಬದ ಇಬ್ಬರು ಸದಸ್ಯರು ಸಹ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ಮಣಿಪುರ ಪೊಲೀಸರು ಬಂಧಿಸಿರುವ ಆರೋಪಿಗಳು ಘಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಸಿಬಿಐ ತನಿಖೆ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com