ಉತ್ತರಾಖಂಡದ ಪಿಥೋರಗಢದಲ್ಲಿ ಕಂಪಿಸಿದ ಭೂಮಿ: ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲು

ಉತ್ತರಾಖಂಡದ ಪಿಥೋರಗಢದಲ್ಲಿ ಸೋಮವಾರ ಬೆಳಿಗ್ಗೆ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 4.0ರಷ್ಟು ತೀವ್ರತೆ ದಾಖಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಪಿಥೋರಗಢ: ಉತ್ತರಾಖಂಡದ ಪಿಥೋರಗಢದಲ್ಲಿ ಸೋಮವಾರ ಬೆಳಿಗ್ಗೆ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 4.0ರಷ್ಟು ತೀವ್ರತೆ ದಾಖಲಾಗಿದೆ.

ಭೂಕಂಪದ ಕೇಂದ್ರಬಿಂದು ಪಿಥೋರಗಢದಿಂದ ಈಶಾನ್ಯಕ್ಕೆ 40 ಕಿಲೋಮೀಟರ್ ದೂರದಲ್ಲಿದೆ. 5 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ.

 16-10-2023 ರಂದು 4.0 ತೀವ್ರತೆ ಇತ್ತು. 09:11:40 IST, ಲ್ಯಾಟ್: 29.86 & ಉದ್ದ: 80.61, ಆಳ: 5 ಕಿಮೀ, ಸ್ಥಳ: 48 ಕಿಮೀ ಎನ್ಇ ಆಫ್ ಪಿಥೋರಗಢ್, ಉತ್ತರಾಖಂಡ್ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಸಾಮಾಜಿಕ ಜಾಲತಾಣ ಎಕ್ಸ್​​ (ಈ ಹಿಂದಿನ ಟ್ವಿಟರ್​​)ನಲ್ಲಿ ಪೋಸ್ಟ್​ ಮಾಡಿದೆ,

ನಿನ್ನೆ ಹರಿಯಾಣದಲ್ಲಿ ಮತ್ತು ದೆಹಲಿಯಲ್ಲೂ ಪ್ರಬಲವಾದ ಕಂಪನ ಉಂಟಾಗಿತ್ತು. ಸಂಜೆ 4.8ಕ್ಕೆ ಭೂಮಿ ಕಂಪಿಸಿತ್ತು. ರಿಕ್ಟರ್ ಮಾಪಕದಲ್ಲಿ 3.1 ತೀವ್ರತೆ ದಾಖಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com