ಮುಂಬೈ-ಗೋವಾ ಚತುಷ್ಪಥ ಹೆದ್ದಾರಿ ಸೇತುವೆ ಕುಸಿತ: ವಿಡಿಯೋ ವೈರಲ್

ಮಹಾರಾಷ್ಟ್ರದಲ್ಲಿ ಮುಂಬೈ-ಗೋವಾ ಚತುಷ್ಪಥ ಹೆದ್ದಾರಿಯ ನಿರ್ಮಾಣ ಹಂತದಲ್ಲಿದ್ದ ಸೇತುವೆಯೊಂದು ಕುಸಿದು ಬಿದ್ದಿದ್ದು, ಸೇತುವೆ ಕುಸಿತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮುಂಬೈ-ಗೋವಾ ಚತುಷ್ಪಥ ಹೆದ್ದಾರಿ ಸೇತುವೆ ಕುಸಿತ
ಮುಂಬೈ-ಗೋವಾ ಚತುಷ್ಪಥ ಹೆದ್ದಾರಿ ಸೇತುವೆ ಕುಸಿತ

ಮುಂಬೈ: ಮಹಾರಾಷ್ಟ್ರದಲ್ಲಿ ಮುಂಬೈ-ಗೋವಾ ಚತುಷ್ಪಥ ಹೆದ್ದಾರಿಯ ನಿರ್ಮಾಣ ಹಂತದಲ್ಲಿದ್ದ ಸೇತುವೆಯೊಂದು ಕುಸಿದು ಬಿದ್ದಿದ್ದು, ಸೇತುವೆ ಕುಸಿತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಹಾರಾಷ್ಟ್ರದ ಚಿಪ್ಲುನ್‌ನಲ್ಲಿ ಸೋಮವಾರ ಈ ನಿರ್ಮಾಣ ಹಂತದ ಸೇತುವೆ ಕುಸಿದು ಬಿದ್ದಿದ್ದು, ಘಟನೆಯಲ್ಲಿ ಸದ್ಯಕ್ಕೆ ಯಾವುದೇ ಪ್ರಾಣಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಮೂಲಗಳ ಪ್ರಕಾರ ಇದು ಮಹಾರಾಷ್ಟ್ರದ ದೊಡ್ಡ ರಸ್ತೆ ಸೇತುವೆಯಾಗಿದೆ. ಸೇತುವೆ ಮೇಲಿನ ಗರ್ಡರ್ ಬಿರುಕುಬಿಟ್ಟಿದ್ದು, ಇಂದು ಮಧ್ಯಾಹ್ನ ಕುಸಿದು ಬಿದ್ದಿದೆ.

ಮುಂಬೈ-ಗೋವಾ ಹೆದ್ದಾರಿಗೆ ನಾಲ್ಕು ಲೇನ್​ನ ರಸ್ತೆ ನಿರ್ಮಾಣ ಮಾಡಲಾಗುತ್ತಿತ್ತು. ಇಂದು ಕಾಮಗಾರಿ ನಡೆಯುತ್ತಿರುವ ವೇಳೆಯೇ ಅದು ಕುಸಿದುಬಿದ್ದಿದೆ. ಮೊದಲು ಒಂದು ಪಿಲ್ಲರ್​ ಕುಸಿಯಿತು. ಬಳಿಕ ಬಳಿಕ ಸಾಲಾಗಿ ಸೇತುವೆ ಕುಸಿಯುತ್ತಿರುವುದು ವಿಡಿಯೋದಲ್ಲಿದೆ. ಸೇತುವೆ ಮೇಲಿದ್ದ ಕ್ರೇನ್ ಯಂತ್ರಕೂ ಕುಸಿದಿದ್ದು, ಯಂತ್ರಕ್ಕೆ ಹಾನಿಯಾಗಿದೆ. ದುರಂತದ ವೇಳೆ ಸ್ಥಳದಲ್ಲಿ ಯಾರೂ ಇಲ್ಲದ ಕಾರಣ ಜೀವಹಾನಿ ಸಂಭವಿಸಿಲ್ಲ. 

ಮಧ್ಯಾಹ್ನ 2:45 ರ ಸುಮಾರಿಗೆ ಗರ್ಡರ್ ಕುಸಿದು ಸುಮಾರು 30 ಮೀಟರ್ ಕೆಳಗೆ ಬಿದ್ದಿದೆ. ಹೆದ್ದಾರಿಯಲ್ಲಿನ ಅವಶೇಷಗಳನ್ನು ತೆಗೆಯುವ ಕೆಲಸ ಇನ್ನೂ ಪ್ರಾರಂಭವಾಗಿಲ್ಲ ಎಂದು ಅವರು ಹೇಳಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com