ಗುಜರಾತ್: ಸರ್ಕಾರಿ ಬಸ್ ಉರುಳಿಬಿದ್ದು, 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!ವಿಡಿಯೋ

ಸರ್ಕಾರಿ ಬಸ್ ವೊಂದು ಉರುಳಿಬಿದ್ದ ಪರಿಣಾಮ 40 ಕ್ಕೂ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಗುಜರಾತ್ ನ ಸುರೇಂದ್ರ ನಗರ ಜಿಲ್ಲೆಯಲ್ಲಿ ಕಳೆದ ರಾತ್ರಿ ನಡೆದಿದೆ.
ಉರುಳಿಬಿದ್ದ ಸರಕಾರಿ ಬಸ್
ಉರುಳಿಬಿದ್ದ ಸರಕಾರಿ ಬಸ್

ಸುರೇಂದ್ರ ನಗರ: ಸರ್ಕಾರಿ ಬಸ್ ವೊಂದು ಉರುಳಿಬಿದ್ದ ಪರಿಣಾಮ 40 ಕ್ಕೂ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಗುಜರಾತ್ ನ ಸುರೇಂದ್ರ ನಗರ ಜಿಲ್ಲೆಯಲ್ಲಿ ಕಳೆದ ರಾತ್ರಿ ನಡೆದಿದೆ.

ಜುನಾಗಢಕ್ಕೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಲಖ್ತರ್ ತಾಲೂಕಿನ ವಾನಾ ಗ್ರಾಮದ ಬಳಿ ನಿನ್ನೆ ರಾತ್ರಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಗಾಯಗೊಂಡಿರುವ ಪ್ರಯಾಣಿಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಿಜೆಪಿ ಶಾಸಕ ಜಗದೀಶ್ ಮಕ್ವಾನಾ, ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

 ನಂತರ ಮಾತನಾಡಿದ ಅವರು, ಕಳೆದ ರಾತ್ರಿ 12-15ರ ಸುಮಾರಿನಲ್ಲಿ ದೇವದರ್‌ನಿಂದ ಜುನಾಗಢಕ್ಕೆ ತೆರಳುತ್ತಿದ್ದ ಎ ಬಸ್ ವಾನಾ ಗ್ರಾಮದ ಬಳಿ ಪಲ್ಟಿಯಾಗಿದೆ. ಬಸ್‌ನಲ್ಲಿದ್ದ 55 ರಿಂದ 60 ಪ್ರಯಾಣಿಕರಿದ್ದರು. ಈ ಪೈಕಿ ಸುಮಾರು 40 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿಸಿದರು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com