ಜಮ್ಮು: ಪಾಕಿಸ್ತಾನದ ರೇಂಜರ್‌ಗಳಿಂದ ಅಪ್ರಚೋದಿತ ಗುಂಡಿನ ದಾಳಿ, ಇಬ್ಬರು ಬಿಎಸ್‌ಎಫ್ ಸಿಬ್ಬಂದಿಗೆ ಗಾಯ

ಜಮ್ಮುವಿನ ಅಂತರರಾಷ್ಟ್ರೀಯ ಗಡಿ (ಐಬಿ) ಉದ್ದಕ್ಕೂ ನಿಯೋಜನೆಗೊಂಡಿರುವ ಗಡಿ ಭದ್ರತಾ ಪಡೆಯ ಮೇಲೆ ಪಾಕಿಸ್ತಾನದ ರೇಂಜರ್‌ಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ಬಿಎಸ್‌ಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಗಡಿ ಭದ್ರತಾ ಪಡೆ (ಪ್ರಾತಿನಿಧಿಕ ಚಿತ್ರ)
ಗಡಿ ಭದ್ರತಾ ಪಡೆ (ಪ್ರಾತಿನಿಧಿಕ ಚಿತ್ರ)

ಜಮ್ಮು: ಇಲ್ಲಿನ ಅಂತರರಾಷ್ಟ್ರೀಯ ಗಡಿ (ಐಬಿ) ಉದ್ದಕ್ಕೂ ನಿಯೋಜನೆಗೊಂಡಿರುವ ಗಡಿ ಭದ್ರತಾ ಪಡೆಯ ಮೇಲೆ ಪಾಕಿಸ್ತಾನದ ರೇಂಜರ್‌ಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ಬಿಎಸ್‌ಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಅರ್ನಿಯಾ ಸೆಕ್ಟರ್‌ನ ವಿಕ್ರಮ್ ಪೋಸ್ಟ್‌ನಲ್ಲಿ ಮಂಗಳವಾರ ಬೆಳಗ್ಗೆ 8.15ರ ಸುಮಾರಿಗೆ ಪಾಕಿಸ್ತಾನದ ರೇಂಜರ್‌ಗಳು ಸೈನಿಕರ ಮೇಲೆ ಗುಂಡು ಹಾರಿಸಿದ್ದಾರೆ. ಪ್ರತಿಯಾಗಿ ಬಿಎಸ್‌ಎಫ್ ಯೋಧರು ಸಹ ಗುಂಡು ಹಾರಿಸಿದ್ದಾರೆ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹೇಳಿಕೆಯಲ್ಲಿ ತಿಳಿಸಿದೆ.

ಗುಂಡಿನ ದಾಳಿಯಲ್ಲಿ ಇಬ್ಬರು ಬಿಎಸ್‌ಎಫ್ ಸಿಬ್ಬಂದಿಗೆ ಬುಲೆಟ್ ಗಾಯಗಳಾಗಿದ್ದು, ತಕ್ಷಣವೇ ವೈದ್ಯಕೀಯ ನೆರವು ನೀಡಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ಅಪ್ರಚೋದಿತ ಗುಂಡಿನ ದಾಳಿ ಬಗ್ಗೆ ಪಾಕಿಸ್ತಾನದ ರೇಂಜರ್‌ಗಳ ಗಮನಕ್ಕೆ ತರಲಾಗುವುದು ಮತ್ತು ಈ ವಿಚಾರವಾಗಿ ಪ್ರತಿಭಟನೆಯನ್ನು ದಾಖಲಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಗಡಿಯ ಎದುರು ಭಾಗದಲ್ಲಿರುವ ಪಾಕಿಸ್ತಾನದ ಇಕ್ಬಾಲ್ ಮತ್ತು ಖನ್ನರ್ ಪೋಸ್ಟ್‌ನಿಂದ ಗಡಿ ಭದ್ರತಾ ಪಡೆಯನ್ನು ಗುರಿಯಾಗಿಸಲು ಉದ್ದೇಶಪೂರ್ವಕವಾಗಿ ಸ್ನೈಪರ್‌ನನ್ನು ನೇಮಿಸಲಾಗಿದೆ ಎಂದು ಮೂಲಗಳು ವರದಿ ಮಾಡಿದೆ. 

ಪಾಕ್ ಕಡೆಯಿಂದ ಗುಂಡಿನ ದಾಳಿ ಪ್ರಾರಂಭವಾದಾಗ ಇಬ್ಬರೂ ಪೋಸ್ಟ್‌ನ ಬಳಿ ಕೆಲವು ವಿದ್ಯುದ್ದೀಕರಣ ಕಾರ್ಯದಲ್ಲಿ ತೊಡಗಿದ್ದರು ಎಂದು ಅವರು ಹೇಳಿದರು.

ಭಾರತ ಮತ್ತು ಪಾಕಿಸ್ತಾನವು ಫೆಬ್ರುವರಿ 25, 2021 ರಂದು ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿವೆ. ಇದರಲ್ಲಿ ಜಮ್ಮು ಮತ್ತು ಕಾಶ್ಮೀರ ಮತ್ತು ಇತರ ವಲಯಗಳಲ್ಲಿ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಕದನ ವಿರಾಮದ ಎಲ್ಲಾ ಒಪ್ಪಂದಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಎರಡೂ ರಾಷ್ಟ್ರಗಳು ಒಪ್ಪಿಕೊಂಡಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com