ನಾಯಿಮರಿ ಹೆಸರಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ದೂರು ದಾಖಲು

ಪವಿತ್ರ ಕುರಾನ್‌ನಲ್ಲಿ ಸ್ಥಾನ ಪಡೆದಿರುವ ಹೆಸರನ್ನು ನಾಯಿ ಮರಿಗೆ ಇಟ್ಟಿದ್ದಕ್ಕಾಗಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಜಿಲ್ಲಾ ನ್ಯಾಯಾಲಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. 
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಪವಿತ್ರ ಕುರಾನ್‌ನಲ್ಲಿ ಸ್ಥಾನ ಪಡೆದಿರುವ ಹೆಸರನ್ನು ನಾಯಿ ಮರಿಗೆ ಇಟ್ಟಿದ್ದಕ್ಕಾಗಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಜಿಲ್ಲಾ ನ್ಯಾಯಾಲಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. 

ಅಕ್ಟೋಬರ್ 4ರಂದು ವಿಶ್ವ ಪ್ರಾಣಿ ದಿನದಂದು ರಾಹುಲ್ ತಮ್ಮ ತಾಯಿ ಮತ್ತು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ನಾಯಿಮರಿಯನ್ನು ಉಡುಗೊರೆಯಾಗಿ ನೀಡಿದ್ದರು.

ಎಐಎಂಐಎಂ ವಕ್ತಾರ ಮೊಹಮ್ಮದ್ ಫರ್ಹಾನ್ ಅವರು ತಮ್ಮ ವಕೀಲ ಅಮ್ಜದ್ ಅಲಿ ಮೂಲಕ ರಾಹುಲ್ ಗಾಂಧಿ  ದೂರು ದಾಖಲಿಸಿದ್ದಾರೆ.

ಕುತೂಹಲಕಾರಿ ವಿಚಾರವೆಂದರೆ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಮೂರು ತಿಂಗಳ ಹಿಂದೆ ಸ್ವತಃ ಫರ್ಹಾನ್ ವಿರುದ್ಧವೇ ಎಫ್‌ಐಆರ್ ದಾಖಲಾಗಿತ್ತು. ಸದ್ಯ ಫರ್ಹಾನ್ ಬಂಧನಕ್ಕೆ ತಡೆ ನೀಡಲಾಗಿದೆ. 

ಇಂಗ್ಲಿಷ್ ಮತ್ತು ಹಿಂದಿ ಪತ್ರಿಕೆಗಳಿಗೆ ಸಂಗ್ರಹಿಸಿರುವ ಮಾಹಿತಿ ಪ್ರಕಾರ, ರಾಹುಲ್ ಗಾಂಧಿ ಅವರು ತಮ್ಮ ನಾಯಿ ಮರಿಗೆ ‘ನೂರಿ’ ಎಂದು ಹೆಸರಿಟ್ಟಿದ್ದಾರೆ. ಈ ಹೆಸರು ಪ್ರವಾದಿ ಮುಹಮ್ಮದ್‌ ಅವರಿಗೆ ಸಂಪರ್ಕ ಹೊಂದಿರುವುದರಿಂದ ಅದನ್ನು ಶುದ್ಧ ಮತ್ತು ಪವಿತ್ರವೆಂದು ಪರಿಗಣಿಸಲಾಗಿದೆ ಎಂದು ಮೊಹಮ್ಮದ್ ಫರ್ಹಾನ್ ದೂರಿನಲ್ಲಿ ತಿಳಿಸಿದ್ದಾರೆ. 

'ನೂರಿ' ಎಂಬುದನ್ನು ಪವಿತ್ರ ಕುರಾನ್‌ನಲ್ಲಿ ಹಲವಾರು ಬಾರಿ ಉಲ್ಲೇಖಿಸಲಾಗಿದೆ. ಅನೇಕ ಮಸೀದಿಗಳು ಸಹ ಅದೇ ಹೆಸರಿನಲ್ಲಿವೆ ಮತ್ತು ಈ ಹೆಸರನ್ನು ನಾಯಿಗೆ ಬಳಸುವುದರಿಂದ ಮುಸ್ಲಿಮರ ಭಾವನೆಗಳಿಗೆ ಧಕ್ಕೆಯುಂಟಾಗಿದೆ' ಎಂದು ಎಐಎಂಐಎಂ ವಕ್ತಾರರು ಹೇಳಿದ್ದಾರೆ.

ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ದೂರು ಸಲ್ಲಿಸಲಾಗಿದೆ.

ದೂರುದಾರರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನವೆಂಬರ್ 8 ರಂದು ದಿನಾಂಕವನ್ನು ನಿಗದಿಪಡಿಸಿದ್ದಾರೆ ಎಂದು ಫರ್ಹಾನ್ ಅವರ ವಕೀಲ ಅಲಿ ಹೇಳಿದ್ದಾರೆ. ರಾಹುಲ್ ಗಾಂಧಿ ಕೂಡ ತಮ್ಮ ಫೇಸ್ ಬುಕ್ ಮತ್ತು ಯೂಟ್ಯೂಬ್ ಖಾತೆಗಳಲ್ಲಿ ನಾಯಿಮರಿಯ ಫೋಟೊವನ್ನು ಹಂಚಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com