ಕಳೆದ ಒಂದು ವರ್ಷದಲ್ಲಿ 188 ಪೊಲೀಸರು ಕರ್ತವ್ಯದ ವೇಳೆ ಹುತಾತ್ಮರಾಗಿದ್ದಾರೆ: ಅಮಿತ್ ಶಾ

ಕಳೆದ ಒಂದು ವರ್ಷದಲ್ಲಿ 188 ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಂದರ್ಭದಲ್ಲಿ ಹುತಾತ್ಮರಾಗಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ.
ಅಮಿತ್ ಶಾ
ಅಮಿತ್ ಶಾ
Updated on

ನವದೆಹಲಿ: ಕಳೆದ ಒಂದು ವರ್ಷದಲ್ಲಿ 188 ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಂದರ್ಭದಲ್ಲಿ ಹುತಾತ್ಮರಾಗಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ.

ಇಂದು ಪೊಲೀಸ್ ಸಂಸ್ಮರಣಾ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಪೊಲೀಸ್ ಸ್ಮಾರಕದಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಿ ಮಾತನಾಡಿದ ಅಮಿತ್ ಶಾ, ಹುತಾತ್ಮ ಪೊಲೀಸರ ತ್ಯಾಗ, ಬಲಿದಾನವನ್ನು ದೇಶ ಎಂದಿಗೂ ಮರೆಯುವುದಿಲ್ಲ ಎಂದರು.

"ದೇಶದಲ್ಲಿ ಕಳೆದ ಒಂದು ವರ್ಷದಲ್ಲಿ, ಸೆಪ್ಟೆಂಬರ್ 1, 2022 ರಿಂದ ಆಗಸ್ಟ್ 31, 2023 ರವರೆಗೆ 188 ಪೊಲೀಸರು ಭದ್ರತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಕರ್ತವ್ಯದಲ್ಲಿದಾಗ ಪ್ರಾಣ ತ್ಯಾಗ ಮಾಡಿದ್ದಾರೆ" ಎಂದು ಕೇಂದ್ರ ಗೃಹ ಸಚಿವರು ತಿಳಿಸಿದರು.

ದೇಶಕ್ಕಾಗಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಪೊಲೀಸ್ ಸಿಬ್ಬಂದಿಯ ಕೆಲಸ ಅತ್ಯಂತ ಕಠಿಣವಾದ ಕೆಲಸ. ಅದು ಹಗಲು ಅಥವಾ ರಾತ್ರಿ, ಚಳಿಗಾಲ ಅಥವಾ ಬೇಸಿಗೆ, ಹಬ್ಬ ಅಥವಾ ಸಾಮಾನ್ಯ ದಿನ ಸೇರಿದಂತೆ ಎಲ್ಲಾ ದಿನಗಳಲ್ಲೂ ಅವರು ಕೆಲಸ ಮಾಡುತ್ತಾರೆ. ಪೊಲೀಸರಿಗೆ ತಮ್ಮ ಕುಟುಂಬದೊಂದಿಗೆ ಹಬ್ಬ ಆಚರಿಸಲು ಸಹ ಅವಕಾಶ ಇಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com