ಕಲ್ಯಾಣ ಯೋಜನೆಗಳನ್ನು 6 ತಿಂಗಳಲ್ಲಿ ಅನುಷ್ಠಾನಗೊಳಿಸಿ: ಪ್ರಧಾನಿ ಮೋದಿ ಸೂಚನೆ

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸರ್ಕಾರದ ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ಆರು ತಿಂಗಳ ಗಡುವು ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸರ್ಕಾರದ ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ಆರು ತಿಂಗಳ ಗಡುವು ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ.
  
ಫಲಾನುಭವಿಗಳನ್ನು ತಲುಪಲು ಮತ್ತು ನೋಂದಾಯಿಸಲು ಕೇಂದ್ರ ಸರ್ಕಾರ ದೇಶದ ಎಲ್ಲಾ 2.7 ಲಕ್ಷ ಪಂಚಾಯತ್‌ಗಳಲ್ಲಿ ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆ ಎಂಬ ಮೆಗಾ ಡ್ರೈವ್ ಅನ್ನು ಪ್ರಾರಂಭಿಸಲಿದೆ ಎಂದು ಅವರು ಹೇಳಿದ್ದಾರೆ.

ಮುಂದಿನ ತಿಂಗಳು ದೀಪಾವಳಿ ನಂತರ ಈ ಮೆಗಾ ಡ್ರೈವ್ ಪ್ರಾರಂಭವಾಗಲಿದೆ ಮತ್ತು ಹಲವು ವಾರಗಳವರೆಗೆ ಇದು ಮುಂದುವರಿಯುತ್ತದೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚಿನ ಕ್ಯಾಬಿನೆಟ್ ಸಭೆಯಲ್ಲಿ, ಮೋದಿ ಅವರು ತಮ್ಮ ಸಹೋದ್ಯೋಗಿಗಳಿಗೆ ಶ್ರಮವಹಿಸಿ ಕೆಲಸ ಮಾಡಲು ಮತ್ತು ಇನ್ನೂ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಪಡೆಯದ ಅರ್ಹ ಫಲಾನುಭವಿಗಳನ್ನು ತ್ವರಿತವಾಗಿ ತಲುಪುವಂತೆ ನೋಡಿಕೊಳ್ಳಿ ಎಂದು ಸೂಚಿಸಿರುವುದಾಗಿ ಅವರು ಹೇಳಿದ್ದಾರೆ.

ಇನ್ನು ಉನ್ನತಾಧಿಕಾರಿಗಳೊಂದಿಗಿನ ಸಭೆಯಲ್ಲಿ, ಕಲ್ಯಾಣ ಯೋಜನೆಗಳನ್ನು ತ್ವರಿತವಾಗಿ ಜಾರಿಗೊಳಿಸುವ ಅಗತ್ಯವನ್ನು ಒತ್ತಿ ಹೇಳಿದ್ದು, ಮುಂದಿನ ಆರು ತಿಂಗಳಲ್ಲಿ ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳು ಪೂರ್ಣ ಪ್ರಮಾಣದಲ್ಲಿ ಫಲಾನುಭವಿಗಳನ್ನು ತಲುಪಬೇಕು ಎಂದು ಸೂಚಿಸಿರುವುದಾಗಿ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com