
ಜೈಪುರ: ರಾಜಸ್ಥಾನದಲ್ಲಿ ದಲಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿದೆ.
ದಿವನಾ ಕುಚಮನ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ದಿವನಾ ಸರ್ಕಲ್ ಅಧಿಕಾರಿ ಚಾಂದ್ ಪೂನಿಯಾ ಈ ಬಗ್ಗೆ ಮಾಹಿತಿ ನೀಡಿದ್ದು, ಆಗಸ್ಟ್ ತಿಂಗಳಲ್ಲಿ ಈ ಘಟನೆ ನಡೆದಿದ್ದರೂ ಭಾನುವಾರದಂದು ಪ್ರಕರಣ ದಾಖಲಾಗಿದೆ ಎಂದು ತಿಳಿಸಿದ್ದಾರೆ.
ಐವರ ವಿರುದ್ಧ ಸೆಕ್ಷನ್ 376 (ಡಿ) (ಗ್ಯಾಂಗ್ ರೇಪ್) ಹಾಗೂ ಎಸ್ ಸಿ/ಎಸ್ ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಕಿಶೋರ್ ಮಾಲಿ, ರಾಮ್‌ದೇವ್ ಥಲೋಡ್ ಮತ್ತು ತೇಜ್‌ಪಾಲ್ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ, ಇನ್ನೂ ಇಬ್ಬರು ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೂನಿಯಾ ಹೇಳಿದರು. ಸಂತ್ರಸ್ತೆಯನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
Advertisement