ವಿಶ್ವಕಪ್ ಪಂದ್ಯಕ್ಕೂ ಮುನ್ನ ಟಿಬೆಟಿಯನ್ ಬೌದ್ಧ ಧರ್ಮಗುರು ದಲೈ ಲಾಮಾ ಭೇಟಿ ಮಾಡಿದ ನ್ಯೂಜಿಲೆಂಡ್ ತಂಡ!

ಭಾರತ ವಿರುದ್ಧ ಭಾನುವಾರ ನಡೆದ ಪಂದ್ಯದ ನಂತರ, ನ್ಯೂಜಿಲೆಂಡ್ ಕ್ರಿಕೆಟ್ ತಂಡ ಮತ್ತು ಅವರ ಕುಟುಂಬ ಸದಸ್ಯರು ಮಂಗಳವಾರ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿರುವ ಮೆಕ್ಲಿಯೋಡ್‌ಗಂಜ್‌ನ ಅವರ ನಿವಾಸದಲ್ಲಿ ದಲೈ ಲಾಮಾ ಅವರನ್ನು ಭೇಟಿಯಾದರು. 
ಟಿಬೆಟಿಯನ್ ಬೌದ್ಧ ಧರ್ಮಗುರು ದಲೈ ಲಾಮಾರನ್ನು ಭೇಟಿ ಮಾಡಿದ ನ್ಯೂಜಿಲೆಂಡ್ ಕ್ರಿಕೆಟ್ ತಂಡ
ಟಿಬೆಟಿಯನ್ ಬೌದ್ಧ ಧರ್ಮಗುರು ದಲೈ ಲಾಮಾರನ್ನು ಭೇಟಿ ಮಾಡಿದ ನ್ಯೂಜಿಲೆಂಡ್ ಕ್ರಿಕೆಟ್ ತಂಡ

ಧರ್ಮಶಾಲಾ: ಭಾರತದ ವಿರುದ್ಧ ಭಾನುವಾರ ನಡೆದ ಪಂದ್ಯದ ನಂತರ, ನ್ಯೂಜಿಲೆಂಡ್ ಕ್ರಿಕೆಟ್ ತಂಡ ಮತ್ತು ಅವರ ಕುಟುಂಬ ಸದಸ್ಯರು ಮಂಗಳವಾರ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿರುವ ಮೆಕ್ಲಿಯೋಡ್‌ಗಂಜ್‌ನ ನಿವಾಸದಲ್ಲಿ ದಲೈ ಲಾಮಾ ಅವರನ್ನು ಭೇಟಿಯಾದರು. 

ಟಿಬೆಟಿಯನ್ ಬೌದ್ಧ ಧರ್ಮಗುರು ದಲೈ ಲಾಮಾ ಅವರು ನ್ಯೂಜಿಲೆಂಡ್ ಕ್ರಿಕೆಟ್ ಆಟಗಾರರೊಂದಿಗೆ ಸುಮಾರು ಒಂದು ಗಂಟೆಗಳ ಕಾಲ ಮಾತುಕತೆ ನಡೆಸಿದರು. 

ಕೆಲವು ಆಟಗಾರರು ಅವರ ಆಶೀರ್ವಾದ ಕೋರಿದರು. ದಲೈ ಲಾಮಾ ಅವರನ್ನು ಭೇಟಿಯಾಗಿ ಸಂತೋಷಪಟ್ಟರು. ದಲೈ ಲಾಮಾ ಅವರೊಂದಿಗೆ ಎಲ್ಲರೂ ಫೋಟೊ ತೆಗೆದುಕೊಂಡಿದ್ದಾರೆ ಎಂದು ದಲೈ ಲಾಮಾ ಅವರ ಕಚೇರಿಯ ಕಾರ್ಯಕಾರಿಯೊಬ್ಬರು ಸುದ್ದಿಸಂಸ್ಥೆ ಐಎಎನ್‌ಎಸ್‌ಗೆ ತಿಳಿಸಿದ್ದಾರೆ.

ನ್ಯೂಜಿಲೆಂಡ್ ತಂಡವು ಅಕ್ಟೋಬರ್ 28 ರಂದು ಐಸಿಸಿ ವಿಶ್ವಕಪ್‌ ಕ್ರಿಕೆಟ್ ಟೂರ್ನಿಯಲ್ಲಿ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​(ಎಚ್‌ಪಿಸಿಎ) ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ಆರನೇ ಪಂದ್ಯವನ್ನು ಆಡಲಿದೆ. ಸದ್ಯ ಆಡಿರುವ ಐದು ಪಂದ್ಯಗಳಲ್ಲಿ ನ್ಯೂಜಿಲೆಂಡ್ ನಾಲ್ಕರಲ್ಲಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

ರಾಜ್ಯದ ರಾಜಧಾನಿ ಶಿಮ್ಲಾದಿಂದ ಸುಮಾರು 250 ಕಿಮೀ ದೂರದಲ್ಲಿರುವ ಎಚ್‌ಪಿಸಿಎ ಕ್ರೀಡಾಂಗಣವು 22,000 ಜನರು ಕುಳಿತುಕೊಳ್ಳುವ ಸಾಮರ್ಥ್ಯದೊಂದಿಗೆ ಒಂಬತ್ತು ಪಿಚ್‌ಗಳನ್ನು ಹೊಂದಿದೆ.

ಇತ್ತೀಚೆಗೆ, ದಲೈ ಲಾಮಾ ಅವರು ಜ್ವರದ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯ ಮೇರೆಗೆ ನವೆಂಬರ್-ಡಿಸೆಂಬರ್‌ನಲ್ಲಿ ಸಿಕ್ಕಿಂ ಮತ್ತು ಕರ್ನಾಟಕ ಪ್ರವಾಸವನ್ನು ರದ್ದುಗೊಳಿಸಬೇಕಾಯಿತು.

1959ರಲ್ಲಿ ಟಿಬೆಟ್‌ನಿಂದ ಪಲಾಯನ ಮಾಡಿದ ನಂತರ ದಲೈ ಲಾಮಾ ಅವರು ಭಾರತದಲ್ಲಿಯೇ ನೆಲೆಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com