ತಮಿಳುನಾಡಿನಲ್ಲಿ ಹಳಿ ತಪ್ಪಿದ ವಿದ್ಯುತ್ ಚಾಲಿತ​ ರೈಲು: ತಪ್ಪಿದ ಭಾರಿ ದುರಂತ

ತಮಿಳುನಾಡಿನಲ್ಲಿ ವಿದ್ಯುತ್ ಚಾಲಿತ​ ರೈಲೊಂದು ಹಳಿ ತಪ್ಪಿದ್ದು ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.
ಹಳಿ ತಪ್ಪಿದ ರೈಲು
ಹಳಿ ತಪ್ಪಿದ ರೈಲು
Updated on: 

ಚೆನ್ನೈ: ತಮಿಳುನಾಡಿನಲ್ಲಿ ವಿದ್ಯುತ್ ಚಾಲಿತ​ ರೈಲೊಂದು ಹಳಿ ತಪ್ಪಿದ್ದು ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

ತಮಿಳುನಾಡು ರಾಜ್ಯದ ಚೆನ್ನೈನ ಅವಡಿ ರೈಲು ನಿಲ್ದಾಣದ ಬಳಿ ಇಂದು ಬೆಳಗ್ಗೆ ವಿದ್ಯುತ್ ಚಾಲಿತ ರೈಲು (electric train) ಹಳಿ ತಪ್ಪಿದೆ. ಅದೃಷ್ಟವಶಾತ್​ ಪ್ರಯಾಣಿಕರಿಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ರೈಲ್ವೆ ಹಳಿ ಬಿರುಕು ಬಿಟ್ಟಿದ್ದರಿಂದ ಈ ಅವಘಡ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ.

ಮೂಲಗಳ ಪ್ರಕಾರ ತಿರುವಳ್ಳೂರಿನಿಂದ ಪುರುಚ್ಚಿ ತಲೈವರ್​ ಡಾ. ಎಂಜಿಆರ್​ ಸೆಂಟ್ರಲ್​ ರೈಲು ನಿಲ್ದಾಣದವರೆಗೆ ರೈಲ್ವೆ ಹಳಿಯ (ಟ್ರ್ಯಾಕ್​) ನಿರ್ವಹಣಾ ಕಾರ್ಯ ನಡೆಯುತ್ತಿದೆ. ಈ ವೇಳೆ, ಇಂದು (ಅ.24) ಬೆಳಗ್ಗೆ ತಿರುವಳ್ಳೂರಿನಿಂದ ತಿರುಟ್ಟಣಿಗೆ ತೆರಳುತ್ತಿದ್ದ ಎಲೆಕ್ಟ್ರಿಕ್​ ರೈಲು ಅಣ್ಣನೂರಿನಿಂದ ಅವಡಿ ತಲುಪಿದ ಬಳಿಕ ಅವಘಡ ಸಂಭವಿಸಿದೆ. ಈ ರೈಲಿನ 4 ಬೋಗಿಗಳು ಹಳಿ ತಪ್ಪಿವೆ ಎಂದು ಹೇಳಲಾಗಿದೆ.

ಇಂದು ರಜಾದಿನವಾದ ಕಾರಣ ರೈಲು ನಿಲ್ದಾಣದಲ್ಲಿ ಜನಸಂದಣಿ ಕಡಿಮೆಯಾಗಿತ್ತು. ಅದೃಷ್ಟವಶಾತ್​ ರೈಲಿನಲ್ಲಿ ಪ್ರಯಾಣಿಕರಿಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ಈ ಬಗ್ಗೆ ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಅವಘಡದಿಂದಾಗಿ ಅವಡಿ -ಚೆನ್ನೈ ಮಾರ್ಗವಾಗಿ ತೆರಳುವ ರೈಲುಗಳು, ವಂದೇ ಭಾರತ್​ ಸೇರಿದಂತೆ ಇತರ ಎಲೆಕ್ಟ್ರಿಕ್​ ರೈಲುಗಳು, ಒಟ್ಟಾರೆಯಾಗಿ ರೈಲು ಸೇವೆಗಳ ಸಂಚಾರಕ್ಕೆ ತೊಂದರೆಯಾಗಿದೆ. ಸದ್ಯ ರೈಲು ಭೋಗಿಗಳ ತೆರವು ಕಾರ್ಯಾಚರಣೆಯನ್ನು ರೈಲ್ವೆ ಇಲಾಖೆ ಕೈಗೊಂಡಿದೆ. 

ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಈ ಅವಘಡಕ್ಕೆ ಚಾಲಕನ ಅಜಾಗರೂಕತೆ ಅಥವಾ ಸಿಗ್ನಲ್​ ವೈಫಲ್ಯ ಕಾರಣವೇ? ಎಂದು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com