ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೋಟಾದಲ್ಲಿ ಓದುತ್ತಿದ್ದ ಐಐಟಿ ಆಕಾಂಕ್ಷಿ ಉತ್ತರ ಪ್ರದೇಶದ ತನ್ನ ಮನೆಯಲ್ಲೇ ಆತ್ಮಹತ್ಯೆ

ರಾಜಸ್ಥಾನದ ಕೋಟಾದಲ್ಲಿ ಐಐಟಿಗೆ ತಯಾರಿ ನಡೆಸುತ್ತಿದ್ದ 20 ವರ್ಷದ ವಿದ್ಯಾರ್ಥಿಯೊಬ್ಬ ಉತ್ತರ ಪ್ರದೇಶದಲ್ಲಿರುವ ತನ್ನ ಸ್ವಗೃಹದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಬಲ್ಲಿಯಾ: ರಾಜಸ್ಥಾನದ ಕೋಟಾದಲ್ಲಿ ಐಐಟಿಗೆ ತಯಾರಿ ನಡೆಸುತ್ತಿದ್ದ 20 ವರ್ಷದ ವಿದ್ಯಾರ್ಥಿಯೊಬ್ಬ ಉತ್ತರ ಪ್ರದೇಶದಲ್ಲಿರುವ ತನ್ನ ಸ್ವಗೃಹದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ರೋಷನ್ ವರ್ಮಾ ಎಂದು ಗುರುತಿಸಲಾಗಿದ್ದು, ಸೋಮವಾರ ರಾತ್ರಿ ಬಲ್ಲಿಯಾ ಜಿಲ್ಲೆಯ ದೇವಕಿ ಛಾಪ್ರಾ ಗ್ರಾಮದ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಕುಟುಂಬದವರೆಲ್ಲ ವರಾಂಡಾದಲ್ಲಿ ಮಲಗಿದ್ದಾಗ ರೋಷನ್ ವರ್ಮಾ ತನ್ನ ಕೋಣೆಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

12ನೇ ತರಗತಿ ಪರೀಕ್ಷೆ ಮುಗಿಸಿದ ನಂತರ ರೋಷನ್ ಕೋಟಾದಲ್ಲಿ ಐಐಟಿಗೆ ತಯಾರಿ ನಡೆಸುತ್ತಿದ್ದರು. ರಜೆಯ ಮೇಲೆ ಮನೆಗೆ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 

ಕುಟುಂಬದವರ ಪ್ರಕಾರ, ರೋಷನ್ ಕಳೆದ ಕೆಲವು ದಿನಗಳಿಂದ ತೀವ್ರ ತಲೆನೋವಿನಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ತಲೆನೋವಿನಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com