ರಾಜಸ್ಥಾನ ಚುನಾವಣೆ: ಕಳೆದ 15 ದಿನಗಳಲ್ಲಿ 244 ಕೋಟಿ ರೂ. ಹಣ ವಶ

ಮುಂದಿನ ತಿಂಗಳು ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ಕಳೆದ 15 ದಿನಗಳಲ್ಲಿ 244 ಕೋಟಿ ರೂಪಾಯಿ ಹಣವನ್ನು ಜಾರಿ ಏಜೆನ್ಸಿಗಳು ವಶಪಡಿಸಿಕೊಂಡಿವೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಜೈಪುರ: ಮುಂದಿನ ತಿಂಗಳು ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ಕಳೆದ 15 ದಿನಗಳಲ್ಲಿ 244 ಕೋಟಿ ರೂಪಾಯಿ ಹಣವನ್ನು ಜಾರಿ ಏಜೆನ್ಸಿಗಳು ವಶಪಡಿಸಿಕೊಂಡಿವೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಪೊಲೀಸ್, ಅಬಕಾರಿ, ಆದಾಯ ತೆರಿಗೆ ಮತ್ತಿತರ ಸಂಸ್ಥೆಗಳಿಂದ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ ಮತ್ತು ಅಕ್ರಮ ನಗದು, ಮದ್ಯ, ಮಾದಕ ದ್ರವ್ಯ, ಚಿನ್ನ, ಬೆಳ್ಳಿ ಇತ್ಯಾದಿಗಳನ್ನು ವಶಪಡಿಸಿಕೊಳ್ಳುವಲ್ಲಿ ಹೊಸ ದಾಖಲೆ ಮಾಡಲಾಗಿದೆ. 2023ರಲ್ಲಿ ಒಟ್ಟು 1,000 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ವರ್ಷ ವಶಕ್ಕೆ ಪಡೆದುಕೊಂಡ ಹಣದ ಮೊತ್ತ ಮೂರು ಪಟ್ಟು ಹೆಚ್ಚಾಗಿದೆ. 2021 ರಲ್ಲಿ 322 ಕೋಟಿ ರೂ., 2022 ರಲ್ಲಿ 347 ಕೋಟಿ ರೂ. ಮತ್ತು 2023 ರಲ್ಲಿ ಇದುವರೆಗೆ 1,021 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಜೂನ್‌ನಿಂದ ಚುನಾವಣಾ ಆಯೋಗ ಎಲ್ಲಾ  ಜಾರಿ ಸಂಸ್ಥೆಗಳೊಂದಿಗೆ ನೇರ ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದ್ದು, ಅಂದಿನಿಂದ ರೂ. 648 ಕೋಟಿ  ಮೌಲ್ಯದ ನಗದು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಳೆದ 15 ದಿನಗಳಲ್ಲಿ 244 ಕೋಟಿ ರೂಪಾಯಿ ಮೌಲ್ಯದ ನಗದು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಪ್ರವೀಣ್ ಗುಪ್ತಾ ಹೇಳಿದ್ದಾರೆ. 

ಈ ಅವಧಿಯಲ್ಲಿ 39.30 ಕೋಟಿ ರೂಪಾಯಿ ನಗದನ್ನು ಪೊಲೀಸರು, ಆದಾಯ ತೆರಿಗೆ ಇಲಾಖೆ ಹಾಗೂ ಇತರೆ ಸಂಸ್ಥೆಗಳು ವಶಪಡಿಸಿಕೊಂಡಿವೆ. ಅದೇ ರೀತಿ 20.12 ಕೋಟಿ ಮೌಲ್ಯದ 10.60 ಲಕ್ಷ ಲೀಟರ್ ಅಕ್ರಮ ಮದ್ಯವನ್ನು ಅಬಕಾರಿ ಇಲಾಖೆ, ಪೊಲೀಸರು ಮತ್ತು ಇತರ ಏಜೆನ್ಸಿಗಳು ವಶಪಡಿಸಿಕೊಂಡಿವ ಎಂದು ಅವರು ವಿವರ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com