ಅಮಿತ್ ಶಾ, ಹಿಮಂತಾ ಶರ್ಮಾ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗದ ಮೊರೆ ಹೋಗಿದೆ. ಛತ್ತೀಸ್‌ಗಢ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಅವರು ನೀಡಿದ ಹೇಳಿಕೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬುಧವಾರ ದೂರು ನೀಡಿದೆ.
ಹಿಮಾಂತ್ ಬಿಸ್ವಾ ಶರ್ಮಾ
ಹಿಮಾಂತ್ ಬಿಸ್ವಾ ಶರ್ಮಾ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗದ ಮೊರೆ ಹೋಗಿದೆ. ಛತ್ತೀಸ್‌ಗಢ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಅವರು ನೀಡಿದ ಹೇಳಿಕೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬುಧವಾರ ದೂರು ನೀಡಿದೆ.
  
ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿದ ಕಾಂಗ್ರೆಸ್ ನಿಯೋಗ, ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ತೆಲಂಗಾಣದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಎಂಟು ವಿಭಿನ್ನ ಮನವಿ ಪತ್ರಗಳನ್ನು ಅವರಿಗೆ ಸಲ್ಲಿಸಿತು. 

ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಂವಹನ ವಿಭಾಗದ ಉಸ್ತುವಾರಿ ಜೈರಾಮ್ ರಮೇಶ್, ಪಕ್ಷದ ನಾಯಕ ಸಲ್ಮಾನ್ ಖುರ್ಷಿದ್, ತೆಲಂಗಾಣ ಎಐಸಿಸಿ ರಾಜ್ಯ ಉಸ್ತುವಾರಿ ಮಾಣಿಕ್ರಾವ್ ಠಾಕ್ರೆ, ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) ಮುಖ್ಯಸ್ಥ ರೇವಂತ್ ರೆಡ್ಡಿ ಮತ್ತಿತರು ನಿಯೋಗದಲ್ಲಿದ್ದರು. 

ಅಕ್ಟೋಬರ್ 16 ರಂದು ಛತ್ತೀಸ್‌ಗಢದ ರಾಜನಂದಗಾಂವ್‌ನಲ್ಲಿ ಮಾತನಾಡಿದ  ಗೃಹ ಸಚಿವರು ಭೂಪೇಶ್ ಬಘೇಲ್ ಅವರ ಸರ್ಕಾರ ತುಷ್ಟೀಕರಣ ರಾಜಕೀಯ ಮತ್ತು ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಛತ್ತೀಸ್‌ಗಢದ ಪುತ್ರ ಭುನೇಶ್ವರ್ ಸಾಹೂ ಅವರನ್ನು ಕೊಂದು ಹಾಕಿದೆ ಎಂದು ಆರೋಪಿಸಿದ್ದಾರೆ ಎಂದು ಕಾಂಗ್ರೆಸ್ ದೂರಿನಲ್ಲಿ ತಿಳಿಸಿದೆ. 

ಅಕ್ಟೋಬರ್ 18 ರಂದು ಛತ್ತೀಸ್‌ಗಢದ ಕವರ್ಧಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೊಹಮ್ಮದ್ ಅಕ್ಬರ್ ವಿರುದ್ಧ ನೀಡಿದ ಹೇಳಿಕೆ ಸಂಬಂಧ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ವಿರುದ್ಧ ಕಾಂಗ್ರೆಸ್ ದೂರು ಸಲ್ಲಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com