ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ರಾಜಸ್ಥಾನ ಪಿಸಿಸಿ ಅಧ್ಯಕ್ಷರ ಕಚೇರಿ, ಮನೆ ಮೇಲೆ ಇಡಿ ದಾಳಿ

ಶಿಕ್ಷಕರ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಸ್ರಾ ಮತ್ತು ಮಹುವಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್...
ರಾಜಸ್ಥಾನ ಪಿಸಿಸಿ ಅಧ್ಯಕ್ಷರ ಮನೆ
ರಾಜಸ್ಥಾನ ಪಿಸಿಸಿ ಅಧ್ಯಕ್ಷರ ಮನೆ

ಜೈಪುರ: ಶಿಕ್ಷಕರ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಸ್ರಾ ಮತ್ತು ಮಹುವಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಮನೆ ಮತ್ತು ಕಚೇರಿ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಶಾಲಾ ಶಿಕ್ಷಣ ಖಾತೆಯ ಮಾಜಿ ಸಚಿವ ದೋತಸ್ರಾ ಅವರ ಸಿಕರ್ ಮತ್ತು ಜೈಪುರದ ನಿವಾಸ, ದೌಸಾದ ಮಹುವಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಓಂಪ್ರಕಾಶ್ ಹುಡ್ಲಾ ಮತ್ತು ಇತರ ಕೆಲವರ ನಿವಾಸಗಳಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25 ರಂದು ಚುನಾವಣೆ ನಡೆಯಲಿದೆ. ಚುನಾವಣೆಗೂ ಮುನ್ನ ಇಡಿ ದಾಳಿ ನಡೆಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

ಈ ಪ್ರಕರಣ ಸಂಬಂಧ ಮಾಜಿ ಆರ್‌ಪಿಎಸ್‌ಸಿ ಸದಸ್ಯ ಬಾಬುಲಾಲ್ ಕಟಾರ ಮತ್ತು ಅನಿಲ್ ಕುಮಾರ್ ಮೀನಾ ಅವರನ್ನು ಇಡಿ ಬಂಧಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com