ಇಂಡಿಯನ್ ಮುಜಾಹಿದ್ದೀನ್ ಸಂಚು ಪ್ರಕರಣ: ಸೈಯದ್ ಮಕ್ಬೂಲ್‌ಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ನ್ಯಾಯಾಲಯ

ಇಂಡಿಯನ್ ಮುಜಾಹಿದ್ದೀನ್ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಿಶೇಷ ನ್ಯಾಯಾಲಯ ಪ್ರಮುಖ ಅಪರಾಧಿ ಸೈಯದ್ ಮಕ್ಬೂಲ್‌ಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. 
ದೆಹಲಿ ಎನ್ಐಎ ನ್ಯಾಯಾಲಯ
ದೆಹಲಿ ಎನ್ಐಎ ನ್ಯಾಯಾಲಯ

ನವದೆಹಲಿ: ಇಂಡಿಯನ್ ಮುಜಾಹಿದ್ದೀನ್ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಿಶೇಷ ನ್ಯಾಯಾಲಯ ಪ್ರಮುಖ ಅಪರಾಧಿ ಸೈಯದ್ ಮಕ್ಬೂಲ್‌ಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. 

ಹೌದು.. ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಸಂಚು ಪ್ರಕರಣದ ಆರೋಪಿಗಳಲ್ಲೊಬ್ಬನಾದ ಸೈಯದ್ ಮಕ್ಬೂಲ್‌ಗೆ ದೆಹಲಿಯ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನ್ಯಾಯಾಲಯ ಗುರುವಾರ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ಹಿಂದೆ ಸೆಪ್ಟೆಂಬರ್ 22ರಂದು ನಗರದ ಎನ್‌ಐಎ ವಿಶೇಷ ನ್ಯಾಯಾಲಯದ ವಿಶೇಷ ನ್ಯಾಯಾಧೀಶರು ಆತನನ್ನು ಆರೋಪಿ ಎಂದು ಘೋಷಿಸಿ, ಶಿಕ್ಷೆ ಪ್ರಮಾಣವನ್ನು ಇಂದಿಗೆ ಮುಂದೂಡಿತ್ತು. ಇದೀಗ ನ್ಯಾಯಾಲಯ ಶಿಕ್ಷೆ ಪ್ರಮಾಣ ಪ್ರಕಟಿಸಿದ್ದು, ಆತನಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. 

ಅಂತೆಯೇ ಈ ಪ್ರಕರಣದಲ್ಲಿ ಅಪರಾಧಿ ಸೈಯದ್ ಮಕ್ಬೂಲ್‌ ಶಿಕ್ಷೆ ಪ್ರಕಟವಾಗಿರುವ ಒಟ್ಟು 11 ಮಂದಿ ಅಪರಾಧಿಗಳಲ್ಲಿ ಐದನೇ ಪ್ರಮುಖ ಅಪರಾಧಿಯಾಗಿದ್ದಾನೆ. ಮಹಾರಾಷ್ಟ್ರದ ನಾಂದೇಡ್ ನಿವಾಸಿಯಾಗಿರುವ ಮಕ್ಬೂಲ್ ನನ್ನು ಫೆಬ್ರವರಿ 28 ರಂದು ಪಾಕಿಸ್ತಾನ ಮತ್ತು ಭಾರತ ಮೂಲದ ಇಂಡಿಯನ್ ಮುಜಾಹಿದ್ದೀನ್ ಸದಸ್ಯರೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಕ್ಕಾಗಿ ಮತ್ತು ಅಪರಾಧ ಮತ್ತು ಪಿತೂರಿಯಲ್ಲಿ ಭಾಗಿಯಾಗಿದ್ದಕ್ಕಾಗಿ ಪ್ರಕರಣದಲ್ಲಿ ಬಂಧಿಸಲಾಗಿತ್ತು. 

ಆರೋಪಿಗಳು ಪಾಕಿಸ್ತಾನದಲ್ಲಿ ನೆಲೆಸಿರುವ ರಿಯಾಜ್ ಭಟ್ಕಳ್ ಮತ್ತು ಭಾರತದಲ್ಲಿ ನೆಲೆಸಿರುವ ಇಮ್ರಾನ್ ಖಾನ್ ಮತ್ತು ಒಬೈದ್-ಉರ್-ರೆಹಮಾನ್ ಸೇರಿದಂತೆ ಇಂಡಿಯನ್ ಮುಜಾಹಿದ್ದೀನ್‌ನ ಪ್ರಮುಖ ವ್ಯಕ್ತಿಗಳೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದರು ಎಂಬುದು ಎನ್ಐಎ ತನಿಖೆಯಲ್ಲಿ ಬಹಿರಂಗವಾಗಿತ್ತು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com