ಜಮ್ಮು-ಕಾಶ್ಮೀರ: ಭಾರತೀಯ ಪೋಸ್ಟ್‌ಗಳ ಮೇಲೆ ಪಾಕ್ ಗುಂಡಿನ ದಾಳಿ, ಬಿಎಸ್ ಎಫ್ ಪ್ರತಿದಾಳಿ

ಜಮ್ಮುವಿನ ಅರ್ನಿಯಾ ಸೆಕ್ಟರ್‌ನಲ್ಲಿರುವ ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ಗುರುವಾರ ರಾತ್ರಿ  ಪಾಕಿಸ್ತಾನದ ರೇಂಜರ್‌ಗಳು ಭಾರತೀಯ ಪೋಸ್ಟ್‌ಗಳ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಗಡಿ ಭದ್ರತಾ ಪಡೆ ಅದಕ್ಕೆ ತಕ್ಕಂತೆ ಪ್ರತಿದಾಳಿ ನಡೆಸುತ್ತಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜಮ್ಮು: ಜಮ್ಮುವಿನ ಅರ್ನಿಯಾ ಸೆಕ್ಟರ್‌ನಲ್ಲಿರುವ ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ಗುರುವಾರ ರಾತ್ರಿ  ಪಾಕಿಸ್ತಾನದ ರೇಂಜರ್‌ಗಳು ಭಾರತೀಯ ಪೋಸ್ಟ್‌ಗಳ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಗಡಿ ಭದ್ರತಾ ಪಡೆ ಅದಕ್ಕೆ ತಕ್ಕಂತೆ ಪ್ರತಿದಾಳಿ ನಡೆಸುತ್ತಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೊನೆಯ ವರದಿಗಳು ಬರುವವರೆಗೂ ಗುಂಡಿನ ಚಕಮಕಿ ನಡೆಯುತ್ತಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ. ವರದಿಗಳ ಪ್ರಕಾರ, ಗುಂಡಿನ ದಾಳಿಯಲ್ಲಿ ಕೆಲವು ಬಿಎಸ್ಎಫ್ ಯೋಧರು ಗಾಯಗೊಂಡಿದ್ದಾರೆ, ಆದರೆ ಅಧಿಕೃತ ಮಾಹಿತಿ ಇಲ್ಲ. ರಾತ್ರಿ 8 ಗಂಟೆ ಸುಮಾರಿಗೆ ಪಾಕಿಸ್ತಾನಿ ಪಡೆಗಳ ಗುಂಡಿನ ದಾಳಿ ಆರಂಭವಾಯಿತು ಎಂದು ಗಡಿ ಭದ್ರತಾ ಪಡೆ ತಿಳಿಸಿದೆ.

ಗುಂಡಿನ ದಾಳಿ ಇನ್ನೂ ಮುಂದುವರೆದಿದೆ. ಅಪ್ರಚೋದಿತ ಗುಂಡಿನ ದಾಳಿಗೆ ಬಿಎಸ್ ಎಫ್ ಪಡೆಗಳು ಸೂಕ್ತ ರೀತಿಯಲ್ಲಿ ಪ್ರತೀಕಾರ ತೀರಿಸಿಕೊಂಡಿವೆ ಎಂದು ಬಿಎಸ್ಎಫ್ ತಿಳಿಸಿದೆ. ಹಿರಿಯ ಬಿಎಸ್‌ಎಫ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com